ಕೆಂಪೇಗೌಡ ರಾಜಧಾನಿ ನಿರ್ಮಾತೃ

CTD KEMPEGWADA
Published on

ಚಿತ್ರದುರ್ಗ: ರಾಜ್ಯದ ರಾಜಧಾನಿ ಬೆಂಗಳೂರನ್ನು ಕಟ್ಟಿ ಬೆಳೆಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಯಿಂದ ಡಿಸಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ‌್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಆಡಳಿತ, ದೂರದೃಷ್ಟಿ ಫಲವಾಗಿ ಸಿಲಿಕಾನ್ ಸಿಟಿ ಇಂದು ದೊಡ್ಡಮಟ್ಟದಲ್ಲಿ ಬೆಳೆದಿದೆ. ರಾಜ್ಯದಲ್ಲಿ ಶ್ರೀಮಂತ ರಾಜಮನೆತನಗಳಲ್ಲಿ ಮೈಸೂರು ಒಡೆಯರ್ ಹಾಗೂ ವಿಜಯನಗರ ಸಂಸ್ಥಾನದ ಅರಸರು ಪ್ರಮುಖರು ಎಂದರು.
ವಿಜಯನಗರದ ಶ್ರೀಕೃಷ್ಣದೇವರಾಯರ ನಂತರ ಅವರ ಸಹೋದರ ಅಚ್ಯುತರಾಯರು ಆಳ್ವಿಕೆಗೆ ಬಂದಾಗ ಸ್ಥಳೀಯ ಆಡಳಿತ ಸುಧಾರಣೆಗಾಗಿ 12 ಹೋಬಳಿಗಳನ್ನು ಒಳಗೊಂಡಿದ್ದ ಹಳೆಯ ಬೆಂಗಳೂರನ್ನು 50 ಸಾವಿರ ವರಹಗಳಿಗೆ ಹಿರಿಯ ಕೆಂಪೇಗೌಡರಿಗೆ ಕೊಡುತ್ತಾರೆ. ಅಂದಿನ ವ್ಯವಸ್ಥೆಯಲ್ಲಿ 30 ಪಗೋಡಗಳ ಆದಾಯವಿತ್ತು. ಹಳೆಯ ಬೆಂಗಳೂರನ್ನು ಆಡಳಿತದ ವಶಕ್ಕೆ ಪಡೆದ ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ಬೃಹತ್ ಬೆಂಗಳೂರು ಆಗಿದೆ ಎಂದರು.
ನಿವೃತ್ತ ಪ್ರಾಂಶುಪಾಲ ಮೀರಸಾಬಿಹಳ್ಳಿ ಡಾ.ಸಿ.ಶಿವಲಿಂಗಪ್ಪ ಅವರು ಮಾತನಾಡಿ,16ನೇ ಶತಮಾನದಲ್ಲಿ ಅತ್ಯುನ್ನತ ಮಾದರಿ,ಯೋ ಜನಾಬದ್ಧ ಶೈಲಿಯ ನಗರಕ್ಕೆ ವಾಣಿಜ್ಯ ನಗರಿ ಬೆಂಗಳೂರು ಸಾಕ್ಷಿಯಾಗಿದೆ. ಜನಹಿತ ಕಾರ್ಯಗಳಿಂದ ಲೋಕ ಪ್ರಸಿದ್ಧಿಯಾಗಿದ್ದ,ಮಾನವ ತಾವಾದಿ ಕೆಂಪೇಗೌಡರು ಅಜರಾಮರವಾಗಿದ್ದಾರೆ.
ಅವರ ಆತ್ಮಸ್ಥೈರ್ಯ,ಪರಿಶ್ರಮ,ಬದ್ಧತೆ,ನೈತಿಕತೆ, ಸ್ವಾಭಿಮಾನ,ಜನಹಿತ ಇಚ್ಚಾಶಕ್ತಿ, ಅನುಪಮ ವ್ಯಕ್ತಿತ್ವ, ನಾಯಕತ್ವದ ಒಳನೋಟಗಳು ಈಗಿನ ಜನಪ್ರತಿನಿಧಿಗಳಿಗೆ ಪ್ರೇರಕಶಕ್ತಿಯಾಗಬೇಕಿದೆ. ನಾಡು ಮತ್ತು ಜನರ ರಕ್ಷಣೆ ಶ್ರೇಷ್ಠ ಕಾರ‌್ಯವೆಂದು ಸಾರಿದ ಇಂತಹ ದಾರ್ಶನಿಕರ ಆಶ ಯಗಳನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಬೇಕಿದೆ ಎಂದರು.
ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ವಿ.ವೀರಣ್ಣ ಮಾತನಾಡಿದರು. ಕಾರ‌್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕುಡಾ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸ್‌ಪಿ ಧರ್ಮೇಂದರ್‌ಕುಮಾರ್‌ಮೀನಾ, ಎಡಿಸಿ ಬಿ.ಟಿ.ಕುಮಾರಸ್ವಾಮಿ, ತಹಸೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಪಿ.ಚೇತನ್, ಗೌರವಾಧ್ಯಕ್ಷ ಪ್ರೊ.ಎನ್.ಈರಣ್ಣ, ಕಾರ‌್ಯದರ್ಶಿ ಎಸ್.ಜಗನ್ನಾಥ್, ನಿರ್ದೇ ಶಕರಾದ ಹನುಮಂತಪ್ಪ, ದ್ಯಾಮಪ್ಪ, ಪರಮೇಶ್ವರ್, ವಿನಯ್, ಲೋಕೇಶ್, ಚಿದಾನಂದ, ನಗರಸಭೆ ವ್ಯವಸ್ಥಾಪಕಿ ಮಂಜುಳಾ, ಬಿಇಒ ಎಸ್.ನಾಗಭೂಷಣ್, ಆಹಾರ ಇಲಾಖೆಯ ಮಲ್ಲಿಕಾರ್ಜುನ್ ಇತರರು ಇದ್ದರು. ಕೆಪಿಎಂ ಗಣೇಶಯ್ಯ ನಿರೂಪಿಸಿದರು.

ವಿವಿಧ ಸ್ಪರ್ಧೆಗಳ ವಿಜೇತರು
ಪ್ರಬಂಧ: ನಗರದ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ಕೀರ್ತತಾ(ಪ್ರ),ಶ್ರೀಕಬೀರಾನಂದ ಪ್ರೌಢಶಾಲೆಯ ಸಿದ್ದೇಶ್(ದ್ವಿ)ಹಾಗೂ ಬೃಹನ್ಮಠ ಪ್ರೌಢಶಾಲೆಯ ಪಿ.ಸಿ.ಬಿಂದು(ತೃ).ಚಿತ್ರಕಲೆ:ವಾಸವಿಆಂಗ್ಲ ಶಾಲೆ ವಿನೇಶ್‌ಚಂದ್ರ(ಪ್ರ)ಬಾಲಕರ ಸರ್ಕಾರಿ ಪಪೂ ಕಾಲೇಜು ಪ್ರೌಢಶಾಲಾ ವಿಭಾಗದ ಎಸ್.ವರುಣ್(ದ್ವಿ)ವಾಸವಿ ವಿದ್ಯಾಸಂಸ್ಥೆ ಎಸ್.ಎನ್.ಅಮಿತ್(ತೃ)ಭಾಷಣ: ಸಂತ ಜೋಸೆಫ್ ಪ್ರೌಢಶಾಲೆಯ ಸಹನಾ(ಪ್ರ), ಬೃಹನ್ಮಠ ಪ್ರೌಢಶಾಲೆಯ ನಿತ್ಯಾ(ದ್ವಿ)ಹಾಗೂ ಬಾಲಕಿಯರ ಪ್ರೌಢಶಾಲೆಯ ಡೀನಾ ಎಸ್ ಜೈನ್(ತೃ).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net