

ಮದ್ದೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂ.27ರಂದು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಜಯಂತಿ ಅಚರಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಳಗ್ಗೆ 7.30ಕ್ಕೆ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇವಾಲಯದ ಆವರಣದಿಂದ ನೂರಾರು ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ಕ್ರೀಡಾಂಗಣಕ್ಕೆ ಆಗಮಿಸುವರು. ಈ ವೇಳೆ ಸಂಚಾರ ಪೊಲೀಸರು ಮೆರವಣಿಗೆ ಯಾವುದೇ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದರು.
ತಹಸೀಲ್ದಾರ್ ಟಿ.ಎನ್. ನರಸಿಂಹಮೂರ್ತಿ, ತಾಪಂ ಇಒ ಸಂದೀಪ್, ಪುರಸಭಾ ಮುಖ್ಯಾಧಿಕಾರಿ ಅಶೋಕ್, ವಿವಿಧ ಸಂಘಟನೆಗಳ ಮುಖಂಡರಾದ ನ.ಲಿ. ಕೃಷ್ಣ, ಉಮಾಶಂಕರ್, ಕ್ರಾಂತಿಸಿಂಹ, ಲಕ್ಷ್ಮಣ್, ರಾಮಚಂದ್ರು, ಶಿವಪ್ಪ, ಸ್ಚಾಮಿ ಇದ್ದರು.