

ಕೆಂಭಾವಿ: ಪಟ್ಟಣದ ಹಲವಾರು ಬಡಾವಣೆ ಮುಖ್ಯ ರಸ್ತೆಗಳು ಕೊಳಚೆ ನೀರಿನಿಂದ ಮಲಿನವಾಗುತ್ತಿದ್ದರೂ ಪುರಸಭೆ ಅಧಿಕಾರಿಗಳು ಮಾತ್ರ ಇತ್ತ ಚಿತ್ತಹರಿಸದೆ ಅಸಡ್ಡೆ ತೋರುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲಕನಗೌಡ ಪೊಲೀಸ್ ಪಾಟೀಲ್ ಕಿಡಿಕಾರಿದ್ದಾರೆ. ವಾರ್ಡ್ 11, 12ರ ಸಂಪರ್ಕ ರಸ್ತೆ ಸಂಪೂರ್ಣ ಕಿತ್ತು ಹೋಗಿ ಚರಂಡಿ ನೀರು ಹರಿಯುತ್ತಿದ್ದರೂ ಪುರಸಭೆ ಮುಖ್ಯಾಧಿಕಾರಿಯಾಗಲಿ, ಇಂಜಿನಿಯರ್ ಆಗಲಿ ದುರಸ್ತಿಗೆ ಮುಂದಾಗುತ್ತಿಲ್ಲ. ಸಂಬAಧಿತ ಇಂಜಿನಿಯರ್‌ಗೆ ಹಲವಾರು ಬಾರಿ ಕರೆ ಮಾಡಿದರೂ ಸ್ವೀಕರಿಸದ್ದರಿಂದ ಸಂಚಾರಕ್ಕೆ ಸಂಚಕಾರ ಬಂದೊದಗಿದೆ. ಅಲ್ಲದೆ ಬಡಾವಣೆ ನಿವಾಸಿಗಳಿ ರೋಗ ಭೀತಿ ಕಾಡುತ್ತಿದೆ. ಜಿಲ್ಲಾಧಿಕಾರಿಗಳು ತಕ್ಷಣ ವಿಶೇಷ ಗಮನಹರಿಸಿ ನಿರ್ಲಕ್ಷÈ ತೋರುತ್ತಿರುವ ಅಧಿಕಾರಿಗಳನ್ನು ಅಮಾನತು ಮಾಡಿ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.