ಕೆಎಂಎಫ್‌ ಅಧ್ಯಕ್ಷ ಜಾರಕಿಹೊಳಿಗೆ ಭಗೀರಥ ಪೀಠದ ಜಗದ್ಗುರುಗಳಿಂದ ಸನ್ಮಾನ

2222222
ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರು, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಅವರನ್ನು ಸನ್ಮಾನಿಸಿದರು.
Published on

ಗೋಕಾಕ: ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಜಿ ಅವರನ್ನು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿ ಬಾಲಚಂದ್ರ ಜಾರಕಿಹೊಳಿ ಅವರು ಮಾತುಕತೆ ನಡೆಸಿದರು.
ಅರಭಾವಿಯಿಂದ ವಿಧಾನಸಭಾ ಕ್ಷೇತ್ರದಿಂದ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಪುರುಷೋತ್ತಮಾನಂದ ಮಹಾಸ್ವಾಮಿಗಳು, ಶಾಸಕರ ಜನಪರ ಕಾರ್ಯಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಕಳೆದ 2004 ರಿಂದ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮಾಜಗಳನ್ನು ಒಗ್ಗೂಡಿಸಿ, ಸಮಾಜಗಳ ಪ್ರಗತಿಗಾಗಿ ಶ್ರಮಿಸಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ, ಯಾರೇ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಆಗಮಿಸುವವರಿಗೆ ಬಾಲಚಂದ್ರ ಜಾರಕಿಹೊಳಿ ಅವರು ಸಹಾಯ ಹಸ್ತ ನೀಡುವ ಶಕ್ತಿಯನ್ನು ದೇವರು ಮತ್ತಷ್ಟು ಕರುಣಿಸಲಿ. ಎಲ್ಲ ಸಮುದಾಯಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ ಸಮಾನತೆಯನ್ನು ಎತ್ತಿ ಹಿಡಿಯುವ ಮೂಲಕ 12ನೇ ಶತಮಾನದ ಅನುಭವ ಮಂಟಪದ ಮಾದರಿಯಲ್ಲಿ ನೂತನ ಶಾಸಕರು ಕರ್ತವ್ಯ ನಿರ್ವಹಿಸಲಿ ಎಂದರು. ಕ್ಷೇತ್ರ ಸಮೃದ್ಧಿಯಾಗಲಿ. ಬಾಲಚಂದ್ರ ಜಾರಕಿಹೊಳಿ ಅವರು ಕಂಡ ಕನಸುಗಳು ಸಾಕಾರಗೊಳ್ಳಲಿ ಎಂದು ಶ್ರೀಗಳು ಇದೇ ಸಂದರ್ಭದಲ್ಲಿ ಶಾಸಕರನ್ನು ಸತ್ಕರಿಸಿ ಶುಭಾಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಕಲ್ಲೋಳಿ ತಾಪಂ ಮಾಜಿ ಸದಸ್ಯ ಅಶೋಕ ಮಕ್ಕಳಗೇರಿ, ಪ್ರಭಾಶುಗರ ಮಾಜಿ ನಿರ್ದೇಶಕ ಮಹಾಂತೇಶ ಕಪ್ಪಲಗುದ್ದಿ, ತುಕ್ಕಾನಟ್ಟಿ ಅಮೋಘಸಿದ್ಧೇಶ್ವರ ದೇವಸ್ಥಾನದ ಅರ್ಚಕ ಕಲ್ಲಪ್ಪ ಬಿ. ಉಪ್ಪಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net