

ತುಮಕೂರು: ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲೂಕು ದೊಡ್ಡಗುಣಿ ಹಾಗೂ ಕೊಂಡ್ಲಿ ಕ್ರಾಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ದ್ವಿಚಕ್ರ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದು ಗುಬ್ಬಿ ತಾಲೂಕಿನ ಹೊಸಹಟ್ಟಿ ಹಾಗೂ ಮುತ್ತುಪುರದ ಹಟ್ಟಿ ಗ್ರಾಮದ ಯುವಕರು ಸಾವನ್ನಪ್ಪಿದ್ದಾರೆ. ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.