ಚಾಮರಾಜನಗರ: ಹಾಸನದಲ್ಲಿ ಗುರುವಾರ ನಡೆಯುವ ಜನಕಲ್ಯಾಣ ಸಮಾವೇಶಕ್ಕೆ ಜಿಲ್ಲೆಯಿಂದ ಕಾರ್ಯಕರ್ತರು ತೆರಳಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಕಳುಹಿಸಿಕೊಡುತ್ತಿರುವುದರಿಂದ ಸಾರ್ವಜನಿಕರ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.
ಸಮಾವೇಶಕ್ಕೆ ಚಾಮರಾಜನಗರ ವಿಭಾಗದಿಂದ 275 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನೀಡಿರುವುದರಿಂದ ಡಿ.5ರಂದು ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿಸಿ ಚಾಮರಾಜನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್‌ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.