

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ನಡೆಸಲು ನಿರ್ಧರಿಸಲಾಗಿದೆ.
ತರಬೇತಿ ಕೇಂದ್ರದ ಕಚೇರಿಯಲ್ಲಿ ಮಾ.27ರೊಳಗಾಗಿ (ಬೆಳಗ್ಗೆ 10ರಿಂದ ಸಂಜೆ 4.30ರ ವರೆಗೆ) ಹೆಸರು ನೋಂದಾಯಿಸಿಕೊಳ್ಳಲು ದೂ. 0821-2515944 ಸಂಪರ್ಕಿಸಬಹುದೆಂದು ವಿವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.