

ಮೈಸೂರು: ನಗರದ ರೇಷ್ಮೆ ಕಾರ್ಖಾನೆ (ಕೆಎಸ್‌ಐಸಿ) ನೌಕರರನ್ನು ನಿಯಮಬಾಹಿರವಾಗಿ ಅಮಾನತು ಮಾಡಿರುವ ಕ್ರಮ ಖಂಡಿಸಿ ಕೆಎಸ್‌ಐಸಿ ನೌಕರರ ಯೂನಿಯನ್ ವತಿಯಿಂದ ಪ್ರತಿಭಟನೆ ಮುಂದುವರಿದಿದೆ.
ಗುರುವಾರ ಪುರಭವನದ ಎದುರು ನಡೆದಿದ್ದ ಪ್ರತಿಭಟನೆಯು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳಾಂತರಗೊಂಡಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ಉದ್ಯೋಗ ಕಾಯಂಗೊಳಿಸುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಆಡಳಿತ ಮಂಡಳಿ ಇದಕ್ಕಾಗಿ 39 ಕಾರ್ಮಿಕರನ್ನು ಅಮಾನತು ಮಾಡಿದೆ ಎಂದು ಆರೋಪಿಸಿದರು.
ಈ ಅಮಾನತು ಆದೇಶ ವಾಪಸ್ ಪಡೆಯಬೇಕು. ಗುತ್ತಿಗೆ ಪದ್ಧತಿ ತೊಲಗಬೇಕು. ನ್ಯಾಯಾಲಯದ ಆದೇಶದಂತೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬೇಕು. ಇಲ್ಲವಾದಲ್ಲಿ ದಸರಾ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ಸಿಎಂಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದರು.