ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

12 Dwd 1 Govindappa Bhajantri
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರಿಗೆ ಸಂಬ0ಧಿಸಿದ 6 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಗಾಂಽನಗರದಲ್ಲಿರುವ ಗೋವಿಂದಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮನೆಯಲ್ಲಿ ತಪಾಸಣೆ ಮಾಡಿ ಆಸ್ತಿಯ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಜತೆಗೆ ಮನೆ ಮುಂದೆ ನಿಂತಿದ್ದ ಕಾರ್‌ನಲ್ಲಿಯೂ ಅಽಕಾರಿಗಳು ತಪಾಸಣೆ ಮಾಡಿದ್ದಾರೆ.

ಇದೇವೇಳೆ ತೇಜಸ್ವಿನಗರದಲ್ಲಿರುವ ಅಳಿಯನ ಮನೆ, ಸವದತ್ತಿ ತಾಲೂಕಿನ ಹೂಲಿ, ಉಗರಗೋಳದಲ್ಲಿರುವ ಫಾರ್ಮ್ಹೌಸ್, ನರಗುಂದದಲ್ಲಿರುವ ಸಹೋದರನ ಮನೆ ಮೇಲೂ ದಾಳಿ ನಡೆಸಲಾಗಿದೆ. ಅಲ್ಲದೆ, ಲಕಮನಹಳ್ಳಿಯಲ್ಲಿರುವ ಕೆಐಎಡಿಬಿ ಕಚೇರಿ ಮೇಲೂ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net