ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ) ಅನುದಾನದಲ್ಲಿ ಶೇ.೨೫ರಷ್ಟು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. ಈ ಭಾಗದ ೯,೨೪೯ ಶಾಲೆಗಳಲ್ಲಿ ೩,೯೮೨ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಹೇಳಿದರು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಡಾ.ಎಸ್.ಎಂ.ಪAಡಿತ್ ರಂಗಮAದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಸಕ್ತ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗಬಾರದೆAಬ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಕೈಗೊಂಡು, ಮಂಡಳಿಯಿAದಲೇ ಗೌರವಧನ ಪಾವತಿಸಲು ಯೋಜಿಸಲಾಗಿದೆ ಎಂದರು.
ಟಾಪ್-೧೦ಗೆ ಪ್ರಯತ್ನ
ರಾಜ್ಯದ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಫಲಿತಾಂಶ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳು ಕೊನೆಯ ಸ್ಥಾನದಲ್ಲಿ ಉಳಿಯುತ್ತಿವೆ. ಮುಂದಿನ ೨-೩ ವರ್ಷಗಳಲ್ಲಿ ಕಲಬುರಗಿ ಸೇರಿ ಈ ಭಾಗದ ಎಲ್ಲ ಜಿಲ್ಲೆಗಳನ್ನು ಟಾಪ್-೧೦ ರೊಳಗೆ ತರುವ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಹಾಗೂ ಶಿಕ್ಷಕರೊಂದಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಈ ದಿಸೆಯಲ್ಲಿ ಪಕ್ಷ ರಹಿತವಾಗಿ ಶ್ರಮಿಸೋಣ ಎಂದರು.
ಡಾ.ಡಿ.ಎಂ.ನAಜುAಡಪ್ಪ ವರದಿ ಅನುಷ್ಠಾನ ಪ್ರಕಾರ ೧೧೪ ಹಿಂದುಳಿದ ತಾಲೂಕುಗಳೆಂದು ಗುರುತಿಸಿದ್ದು, ಈ ಪೈಕಿ ೩೯ ಅತಿ ಹಿಂದುಳಿದ ತಾಲೂಕುಗಳಿವೆ. ಕಲ್ಯಾಣ ಕರ್ನಾಟಕ ಭಾಗದ ೨೧ ತಾಲೂಕುಗಳು ಸೇರಿದ್ದು, ಈ ಪೈಕಿ ಕಲಬುರಗಿ ಜಿಲ್ಲೆಯ ೩ ತಾಲೂಕುಗಳು ಸೇರಿವೆ ಎಂದು ಮಾಹಿತಿ ನೀಡಿದರು.
ಚಿಕ್ಕಬಳ್ಳಾಪುರದ ಶಿಕ್ಷಣ ತಜ್ಞ ಪ್ರೊ.ನಾಗರಾಜಯ್ಯ ಅವರ ಪ್ರೇರಣೆಯಿಂದ ಜೇವರ್ಗಿ ತಾಲೂಕು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಿಸಿ ಉತ್ತಮ ಸಾಧನೆ ಮಾಡಿದೆ. ಈ ನಿಟ್ಟಿನಲ್ಲಿ ಅಕ್ಷರದ ಆವಿಷ್ಕಾರ ಯೋಜನೆ ಮಾದರಿಯಲ್ಲಿ ಮತ್ತೊಂದು ಯೋಜನೆ ರೂಪಿಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ, ಕೆಕೆಆರ್‌ಡಿಬಿ ಅನುದಾನದಡಿ ಶಿಕ್ಷಣ ವಲಯಕ್ಕೆ ಒಂದು ಸಾವಿರ ಕೋಟಿ ರೂ. ಮೀಸಲಿಡಬೇಕು. ಶಿಕ್ಷಕರ ಹುದ್ದೆ ಭರ್ತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೇಮಕ ಆದೇಶ ಶೀಘ್ರ ನೀಡಬೇಕು. ೩೭೧(ಜೆ) ಅಡಿ ಬಡ್ತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ರಾಷ್ಟಿçÃಯ ಶಿಕ್ಷಣ ನೀತಿ ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಶಾಸಕ ಅಲ್ಲಮಪ್ರಭು ಪಾಟೀಲ್ ಅಧ್ಯಕ್ಷತೆವಹಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರ್‌ಸಿAಗ್ ಮೀನಾ, ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ.ಆಕಾಶ್.ಎಸ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ದೊಡ್ಡಮನಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಮರೆಪ್ಪ ಬಸವಪಟ್ಟಣ, ಬಿಇಓ ವೀರಣ್ಣ ಬೊಮ್ಮನಳ್ಳಿ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಪರಮೇಶ್ವರ ದೇಸಾಯಿ ಇತರರು ಇದ್ದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪಗೌಡ ಬಿರಾದಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಕಲಾವಿದ ಶಂಕರ ಹೂಗಾರ್ ಪ್ರಾರ್ಥಿಸಿದರು.