

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಏಳೂ ಜಿಲ್ಲೆಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಿವಿಧ ಕಾರ್ಯಕ್ರಮ ಹಾಕಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ) ಅನುದಾನದಲ್ಲಿ ಶೇ.೨೫ರಷ್ಟು ಶಿಕ್ಷಣ ಕ್ಷೇತ್ರಕ್ಕಾಗಿ ಮೀಸಲಿಡಲಾಗಿದೆ ಎಂದು ಮಂಡಳಿ ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಹೇಳಿದರು.
ಜಿಪಂ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಡಾ.ಎಸ್.ಎಂ.ಪAಡಿತ ರಂಗಮAದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಣದಿಂದಲೇ ಈ ಭಾಗದ ಸಮಗ್ರ ವಿಕಾಸ ಸಾಧ್ಯ. ಈ ನಿಟ್ಟಿನಲ್ಲಿ ಮಂಡಳಿಯು ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಈ ಭಾಗದ ೯,೨೪೯ ಶಾಲೆಗಳಲ್ಲಿ ೩,೯೮೨ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ ಎಂದರು.
ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗಬಾರದೆಂಬ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಕೈಗೊಂಡು, ಮಂಡಳಿಯಿAದಲೇ ಗೌರವಧನ ಪಾವತಿಸಲು ಯೋಜಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ ಈ ಭಾಗದ ಜಿಲ್ಲೆಗಳು ಕೊನೇ ಸ್ಥಾನದಲ್ಲಿರುತ್ತಿವೆ. ಮುಂದಿನ ೨-೩ ವರ್ಷಗಳಲ್ಲಿ ಕಲಬುರಗಿ ಸೇರಿ ಈ ಭಾಗದ ಎಲ್ಲ ಜಿಲ್ಲೆಗಳನ್ನು ಟಾಪ್-೧೦ ರೊಳಗೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು. ಇದಕ್ಕಾಗಿ ಎಲ್ಲರೂ ಪಕ್ಷರಹಿತವಾಗಿ ಶ್ರಮಿಸೋಣ ಎಂದು ಕೋರಿದರು.
ಚಿಕ್ಕಬಳ್ಳಾಪುರದ ಶಿಕ್ಷಣ ತಜ್ಞ ಪ್ರೊ.ನಾಗರಾಜಯ್ಯ ಅವರ ಪ್ರೇರಣೆಯಿಂದ ಜೇವರ್ಗಿ ತಾಲೂಕು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ಕಂಡು ಉತ್ತಮ ಸಾಧನೆ ಮಾಡಿದೆ. ಈ ನಿಟ್ಟಿನಲ್ಲಿ ಅಕ್ಷರದ ಆವಿಷ್ಕಾರ ಯೋಜನೆ ಮಾದರಿಯಲ್ಲಿ ಮತ್ತೊಂದು ಯೋಜನೆ ರೂಪಿಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ, ಕೆಕೆಆರ್‌ಡಿಬಿ ಅನುದಾನದಡಿ ಶಿಕ್ಷಣ ವಲಯಕ್ಕೆ ಒಂದು ಸಾವಿರ ಕೋಟಿ ರೂ.ಮೀಸಲಿಟ್ಟು ಸಮರ್ಪಕವಾಗಿ ವಿನಯೋಗಿಸಬೇಕು. ಭರ್ತಿಯಾದ ಶಿಕ್ಷಕರಿಗೆ ನೇಮಕ ಆದೇಶ ಶೀಘ್ರ ನೀಡಬೇಕು. ೩೭೧(ಜೆ) ಅಡಿ ಬಡ್ತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು. ರಾಷ್ಟಿçÃಯ ಶಿಕ್ಷಣ ನೀತಿ ಯಥಾವತ್ತಾಗಿ ಜಾರಿಗೆ ತರಬೇಕು ಎಂದರು.
ಶಾಸಕ ಅಲ್ಲಮಪ್ರಭು ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರ್‌ಸಿAಗ್ ಮೀನಾ, ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ.ಆಕಾಶ ಎಸ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ದೊಡ್ಡಮನಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಮರೆಪ್ಪ ಬಸವಪಟ್ಟಣ, ಬಿಇ ವೀರಣ್ಣ ಬೊಮ್ಮನಳ್ಳಿ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಪರಮೇಶ್ವರ ದೇಸಾಯಿ ಇತರರು ಇದ್ದರು. ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.