ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ಸಹಕಾರ ಭಾರತಿ ಅಭ್ಯರ್ಥಿಗಳು ಕಣಕ್ಕೆ

24sirsi3
Published on

ಶಿರಸಿ: ಸಹಕಾರಿ ಕ್ಷೇತ್ರದ ಶುದ್ಧೀಕರಣ, ವೃದ್ಧೀಕರಣ ಹಾಗೂ ಆಧುನೀಕರಣದ ಉದ್ದೇಶದಿಂದ ಈ ಬಾರಿ ಕೆಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಭಾರತಿ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಸಹಕಾರ ಭಾರತಿ ರಾಜ್ಯಾಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು.

ನಗರದ ಪಂಚವಟಿ ಸಭಾಂಗಣದಲ್ಲಿ ಶನಿವಾರ ಸಹಕಾರಿ ಪ್ರಮುಖರು, ಆಕಾಂಕ್ಷಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಹಕಾರ ಭಾರತಿ ಸಂಘಟನೆ ಸಹಕಾರದಡಿ ಜಿಲ್ಲೆಯ ಎಲ್ಲ ಸಹಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಲಾಗಿದೆ. ಈ ಹಿಂದೆ ಸಾಕಷ್ಟು ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದೇ ರೀತಿ ಸಹಕಾರಿ ಭಾರತಿ ವತಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವಂತೆ ಶ್ರಮಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮಾತನಾಡಿ, ಸಹಕಾರ ಭಾರತಿ ವತಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬಿಜೆಪಿಯಿಂದಲೂ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಸಂಸದ ಅನಂತಕುಮಾರ ಹೆಗಡೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ಸಹಕಾರ ಭಾರತಿಯ ಮೋಹನದಾಸ ನಾಯಕ ಶಂಭುಲಿಂಗ ಹೆಗಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net