ಕೆಡುಕು ಮಾಡಿದರೆ ಠಾಣೆಗೆ ಮಾಹಿತಿ ನೀಡಿ

21.ktal.02
Published on

ಕವಿತಾಳ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ತೆರೆದ ಮನೆ ಕಾರ್ಯಕ್ರಮ ನಡೆಯಿತು. ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿದರು.

ಅಪರಾಧ ವಿಭಾಗದ ಪಿಎಸ್‌ಐ ಪಂಪಣ್ಣ ಮಾತನಾಡಿ, ಸಮಾಜದಲ್ಲಿ ಅಪರಾಧಗಳು ನಡೆದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಾಗುವುದು. ಅಪರಾಧ ಹಾಗೂ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ನಿಮಗೆ ಯಾರಾದರೂ ಕೆಡುಕು ಮಾಡಿದರೆ ಠಾಣೆಗೆ ಮಾಹಿತಿ ನೀಡಬೇಕು. ಪೊಲೀಸರ ಕರ್ತವ್ಯದ ಬಗ್ಗೆ ಮಾಹಿತಿ ಹೊಂದಬೇಕೆಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net