ಕೆದಮುಳ್ಳೂರು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಕೆದಮುಳ್ಳೂರು ಗ್ರಾಮ ಪಂಚಾಯಿತಿ
Published on

ವಿರಾಜಪೇಟೆ: ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಾಳೇಟಿರ ಕೆ.ಜೆಫ್ರಿ ಉತ್ತಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಂ.ಎ.ಪರಮೇಶ್ವರ ಚುನಾಯಿತರಾದರು.

ಗ್ರಾಪಂ ಆವರಣದಲ್ಲಿ ಶುಕ್ರವಾರ ಎರಡನೇ ಅವಧಿಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಮಾಳೇಟಿರ ಕೆ.ಜೆಫ್ರಿ ಉತ್ತಪ್ಪ ಹಾಗೂ ಬಿಜೆಪಿ ಬೆಂಬಲಿತ ಮಾಳೇಟಿರ ಸಾಬಾ ಮುತ್ತಪ್ಪ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಎಂ.ಎ.ಪರಮೇಶ್ವರ ಮತ್ತು ಕಾಂಗ್ರೆಸ್ ಬೆಂಬಲಿತ ಕೊರಿಯಾರು ತಾಯಮ್ಮ ನಾಮಪತ್ರ ಸಲ್ಲಿಸಿದ್ದರು.

ಬಳಿಕ ಮತದಾನ ನಡೆದು ಒಟ್ಟು 13 ಮತಗಳು ಚಲಾವಣೆಗೊಂಡವು. ಒಂದು ಮತ ತಿರಸ್ಕೃತಗೊಂಡಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳಿಗೂ ತಲಾ 6 ಮತಗಳು ಬಂದ ಕಾರಣ ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಲು ನಿರ್ಧರಿಸಲಾಯಿತು. ಇದರಲ್ಲಿ ಮಾಳೇಟಿರ ಕೆ.ಜೆಫ್ರಿ ಉತ್ತಪ್ಪ ಚುನಾಯಿತರಾದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂ.ಎ.ಪರಮೇಶ್ವರ(7 ಮತ) ತಮ್ಮ ಪ್ರತಿಸ್ಪರ್ಧಿ ಕೊರಿಯಾರು ತಾಯಮ್ಮ (6 ಮತ) ವಿರುದ್ಧ ಜಯ ಸಾಧಿಸಿದರು.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವಿರಾಜಪೇಟೆ ತಾಲೂಕು ಸಹಾಯಕ ನಿರ್ದೇಶಕ ಡಾ.ನವೀನ್ ಕುಮಾರ್ ಚುನಾವಣಾಧಿಕಾರಿಯಾಗಿ ಮತ್ತು ಪಿಡಿಒ ಪ್ರಮೋದ್ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net