

ಬೆಂಗಳೂರು: ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಕಲೆಯ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ನಗರದ ಜೆ.ಸಿ. ರಸ್ತೆಯ ಪ್ರಧಾನ ಕಚೇರಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಥಟ್ ಅಂತ ಹೇಳಿ ಖ್ಯಾತಿಯ ವಿಜ್ಞಾನಿ ಡಾ. ಎನ್. ಸೋಮೇಶ್ವರ್, ಕನ್ನಡ ನಾಡಿನ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತು ರಸ ಪ್ರಶ್ನೆ ರೂಪದಲ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ವಿಜೇತರಿಗೆ ಕನ್ನಡ ಭಾಷೆ ಮತ್ತು ಸಾಹಿತ್ಯ ಉತ್ತೇಜಿಸುವ ಕನ್ನಡ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.
ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು, ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಚಂದ್ರ, ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಕೆ. ರಾಮ ನಾಯ್ಕ , ಮುಖ್ಯ ಪ್ರಧಾನ ವ್ಯವಸ್ಥಾಪಕರು, ಪ್ರಧಾನ ವ್ಯವಸ್ಥಾಪಕರು, ಉಪ ಪ್ರಧಾನ ವ್ಯವಸ್ಥಾಪಕರು ಇತರೆ ಅಧಿಕಾರಿಗಳು ಹಾಜರಿದ್ದರು.