

ಚಿತ್ರದುರ್ಗ: ತಾಲೂಕಿನ ಕೆನ್ನೆಡಲು ಗ್ರಾಮದಲ್ಲಿ ಜ್ವರ ಪ್ರಕರಣ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಸರ್ವೇಕ್ಷಣಾ ತಂಡದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ರೋಗಶಾಸ್ತ್ರಜ್ಞ ಡಾ.ರುದ್ರೇಶ್, ಪ್ರಯೋಗಶಾಲಾ ತಂತ್ರಜ್ಞ ನಾಗರಾಜ್‌ನಾಯ್ಕ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ಡಿ.ಎಸ್.ಹಳ್ಳಿ ಆರೋಗ್ಯ ನಿರೀಕ್ಷಣಾಧಿಕಾರಿ ಬಾಗೇಶ್ ಅವರು ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ಗ್ರಾಮದ ಕೆಲವು ನಿವಾಸಿಗಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಅವರ ರಕ್ತ ಪರೀಕ್ಷೆಯಲ್ಲಿ ಡೆಂೆ ಜ್ವರ ಕಂಡುಬಂದಿದೆ. ಗ್ರಾಮದಲ್ಲಿ ಜ್ವರ ಪರೀಕ್ಷೆ, ತಾತ್ಕಾಲಿಕ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಮನೆ, ಮನೆ ಸಮೀಕ್ಷೆಯನ್ನೂ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.