ಕೆಪಿಎಸ್​ಗೆ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಸೌಲಭ್ಯ

07Koppa01 WEB
Published on

ಕೊಪ್ಪ: ನನ್ನ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಿ ಕೆಲಸ ಮಾಡಿದ್ದೇನೆ ಎಂದು ಶಾಸಕ ಟಿ.ಡಿ ರಾಜೇಗೌಡ ಹೇಳಿದರು. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕಾಲೇಜು ಹಾಗೂ ಪ್ರೌಢಶಾಲೆ ವಿಭಾಗದ ನೂತನ ಹೆಚ್ಚುವರಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕೆಪಿಎಸ್​ನಲ್ಲಿ ವಿಜ್ಞಾನ ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ತೆರೆಯಲು ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದಾಗ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ 176 ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲಾಗಿತ್ತು. ಸರ್ಕಾರಿ ಶಾಲೆಗಳನ್ನು ಉಳಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಅನುಕೂಲವಾಯಿತು ಎಂದರು.

ಸರ್ಕಾರಿ ಶಾಲೆಗಳಿಗೆ ಉತ್ತಮ ಕ್ರೀಡಾಂಗಣ, ಕಂಪ್ಯೂಟರ್ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ ಇತ್ಯಾದಿ ಸೌಲಭ್ಯ ಒದಗಿಸಿದರೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತದೆ. ಪ್ರಾಥಮಿಕ ಶಾಲೆಗೆ ನಬಾರ್ಡ್ ಯೋಜನೆಯಲ್ಲಿ 6 ಕೊಠಡಿಗಳನ್ನು 92 ಲಕ್ಷ ರೂ. ವೆಚ್ಚದಲ್ಲಿ, ಪ್ರೌಢಶಾಲೆ ವಿಭಾಗಕ್ಕೆ ಅಗತ್ಯವಿದ್ದ ಕೊಠಡಿ, ಛಾವಣಿಯನ್ನು 26.50 ಲಕ್ಷ ರೂ. ವೆಚ್ಚದಲ್ಲಿ ನಿರ್ವಿುತಿ ಕೇಂದ್ರದ ಮೂಲಕ ಸಾಕಾರಗೊಳಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ವಿಜ್ಞಾನ ಪ್ರಯೋಗಾಲಯ ಮತ್ತು ಸ್ಮಾರ್ಟ್ ಕ್ಲಾಸ್ ಉಪಕರಣ ಒದಗಿಸುವಂತೆ ಟಿ.ಡಿ.ರಾಜೇಗೌಡ ಅವರಿಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net