ಕೆರೆ ಆವರಣದಲ್ಲಿ ಸ್ವಚ್ಛತಾ ಕೆಲಸ ಆರಂಭ

4Imam1-WEb
ಬೆಳಗಾವಿ ನಗರದ ಕೋಟೆ ಕೆರೆ ಆವರಣದಲ್ಲಿ ಜೆಸಿಬಿ ಬಳಸಿ ಚರಂಡಿ ಸ್ವಚ್ಛಗೊಳಿಸುತ್ತಿರುವುದು.
Published on

ಬೆಳಗಾವಿ: ನಗರದ ಕೋಟೆ ಕೆರೆ ಆವರಣದಲ್ಲಿ ಮಂಗಳವಾರ ಬೆಳಗ್ಗೆಯಿಂದ ಮಹಾನಗರ ಪಾಲಿಕೆ ಸಿಬ್ಬಂದಿ ಸ್ವಚ್ಛತಾ ಕೆಲಸ ಕೈಗೊಂಡಿದ್ದಾರೆ. ಕೆರೆ ಮುಖ್ಯದ್ವಾರದಿಂದ ಬುಡಾ ಕಚೇರಿ ಸಮೀಪದವರೆಗೆ ಹಾಯ್ದು ಹೋಗಿರುವ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. ಅಲ್ಲದೆ, ಪಾದಚಾರಿ ಮಾರ್ಗ ಪಕ್ಕ ಬಿದ್ದಿರುವ ತ್ಯಾಜ್ಯ ಪದಾರ್ಥಗಳನ್ನು ಒಂದೆರಡು ದಿನಗಳಲ್ಲಿ ವಿಲೇವಾರಿ ಮಾಡಲಾಗುವುದು. ಚರಂಡಿ ಸುತ್ತಲಿನ ಪ್ರದೇಶದಲ್ಲಿ ಔಷಧ ದ್ರಾವಣ ಸಿಂಪಡಿಸಲಾಗುವುದು. ಜನರ ಆರೋಗ್ಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ. ಸಂಜಯ ಡುಮ್ಮಗೋಳ ತಿಳಿಸಿದ್ದಾರೆ.

ಅಸಮರ್ಪಕ ಚರಂಡಿ ನಿರ್ವಹಣೆಯಿಂದಾಗಿ ಕೆರೆ ಆವರಣದಲ್ಲಿ ಅವ್ಯವಸ್ಥೆ ಹೆಚ್ಚಿರುವ ಕುರಿತು ‘ವಿಜಯವಾಣಿ’ ದಿನಪತ್ರಿಕೆ ಮಂಗಳವಾರದ ಸಂಚಿಕೆಯಲ್ಲಿ ‘ಕೋಟೆ ಕೆರೆ ಪರಿಸರದಲ್ಲಿ ದುರ್ನಾತ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net