ಕೆರೆ ಒತ್ತುವರಿ ತೆರವಿಗೆ ಮಾರ್ಚ್​ ಗಡುವು

12
Published on

ಡಿಸಿ ಶುಭಕಲ್ಯಾಣ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹಿರಂಗ, 1187 ಕಡೆ ಅತಿಕ್ರಮಣ

ತುಮಕೂರು: ಜಿಲ್ಲೆಯಲ್ಲಿ ಇರುವ 2061 ಕೆರೆಗಳ ಪೈಕಿ ಬರೋಬ್ಬರಿ 1187 ಕೆರೆಗಳು ಒತ್ತುವಾರಿಯಾಗಿರುವ ಅಘಾತಕಾರಿ ವಿಷಯವನ್ನು ಜಿಲ್ಲಾಧಿಕಾರಿ ಶುಭಕಲ್ಯಾಣ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹಿರಂಗವಾಯಿತು.

ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ, ಅರಣ್ಯ ಇಲಾಖೆಗೆ ಸೇರಿದಂತೆ ಜಿಲ್ಲೆಯಲ್ಲಿ ಕೇವಲ 874 ಕೆರೆಗಳು ಮಾತ್ರ ಒತ್ತುವರಿ ಮುಕ್ತವಾಗಿದ್ದು ಇನ್ನುಳಿದ ಬಹುತೇಕ ಕೆರೆಗಳ ಒತ್ತುವರಿಯಾಗಿದ್ದು ಇಂತಹ ಕೆರೆಗಳನ್ನು ಗುರುತಿಸಿ ಮಾರ್ಚ್​ ಅಂತ್ಯದೊಳಗೆ ಒತ್ತುವರಿ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್​ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸುವ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಕೆರೆಗಳನ್ನು ಸಂರಕ್ಷಿಸುವ ಯೋಜನೆ ಕೈಗೊಳ್ಳುಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆರೆಗಳ ಅತಿಕ್ರಮಣ ಅಥವಾ ಒತ್ತುವರಿ ಮಾಡಿದವರಿಗೆ ನೋಟಿಸ್​ ನೀಡಿ ಒತ್ತುವರಿ ತೆರವುಗೊಳಿಸುವ ಕ್ರಮ ಕೈಗೊಳ್ಳಬೇಕು. ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳಿಂದ ಹರಿಯುವ ತ್ಯಾಜ್ಯ ಮತ್ತು ಮಲಿನಗೊಂಡ ನೀರು ಕೆರೆಗಳಿಗೆ

ಸೇರಿ ಮಲಿನವಾಗದಂತೆ ಅಗತ್ಯ ಮುನ್ಸೂಚನೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಕೆರೆಗಳನ್ನು ಸಂರಕ್ಷಿಸುವಲ್ಲಿ ರೈತರ ಪಾತ್ರ ಮಹತ್ವದ್ದು. ಹಾಗಾ, ಕೆರೆಗಳ ಒತ್ತುವರಿ ತೆರವಿಗಾಗಿ ರೈತರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಹಿರಿಯ ಸಿವಿಲ್​ ನ್ಯಾಯಾಧೀಶೆ ನೂರುನ್ನೀಸಾ ಮತ್ತಿತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net