ಕೆರೆ-ಕಟ್ಟೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ

14ark1
Published on

ಅರಕಲಗೂಡು: ತಾಲೂಕಿನ ಗಂಗನಾಳು ಏತ ನೀರಾವರಿ ಕೆರೆ-ಕಟ್ಟೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕ ಎ. ಮಂಜು ಸೋಮವಾರ ಚಾಲನೆ ನೀಡಿದರು.


ಬಳಿಕ ಮಾತನಾಡಿದ ಅವರು, ಈ ವ್ಯಾಪ್ತಿಯ 88 ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರು ತಮ್ಮ ಊರಿನ ಕೆರೆಯನ್ನು ಮೊದಲು ತುಂಬಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಬೇಡಿ. ಈ ಭಾಗದ ಎಲ್ಲ ಕೆರೆಗಳನ್ನು ತುಂಬಿಸಲಾಗುವುದು. ವೇಳಾಪಟ್ಟಿ ತಯಾರಿಸಿ ಅದರಂತೆ ಕೆರೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಆರು ವರ್ಷಗಳ ಹಿಂದೆ ಪ್ರಾರಂಭವಾದ 33 ಕೋಟಿ ರೂ. ವೆಚ್ಚದ ಏತನೀರಾವರಿ ಯೋಜನೆಯ ಮೊದಲ ಮತ್ತು ಎರಡನೇ ಹಂತದ ಕಾಮಗಾರಿಗಳು ಪೂರ್ಣಗೊಂಡಿವೆ. ಸಣ್ಣಪುಟ್ಟ ಕೆರೆ-ಕಟ್ಟೆಗಳೂ ಸೇರಿ 100ಕ್ಕೂ ಹೆಚ್ಚಿನ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ. ಯೋಜನೆ ಅನುಷ್ಠಾನಗೊಂಡ ಬಳಿಕ ರೈತರ ನೀರಿನ ಸಮಸ್ಯೆಗೆ ಪರಿಹಾರ ದೊರಕಿದೆ. ಇದರ ಉಪಯೋಗ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಸಲಹೆ ಮಾಡಿದರು.


ಮುಖಂಡರಾದ ಮುದ್ದನಹಳ್ಳಿ ರಮೇಶ್, ಸತೀಶ್, ರಾಜೇಗೌಡ, ಗ್ರಾಪಂ ಅಧ್ಯಕ್ಷರಾದ ಗೌರಮ್ಮ, ರೂಪ್‌ಕುಮಾರ್, ಸದಸ್ಯೆ ಪುಟ್ಟಮ್ಮ, ಹೇಮಾವತಿ ನಾಲಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೋಕುಲ್ ಇತರರಿದ್ದರು.

ಅರಕಲಗೂಡು ತಾಲೂಕಿನ ಗಂಗನಾಳು ಏತ ನೀರಾವರಿ ಕೆರೆ-ಕಟ್ಟೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕ ಎ. ಮಂಜು ಸೋಮವಾರ ಚಾಲನೆ ನೀಡಿದರು. ಮುದ್ದನಹಳ್ಳಿ ರಮೇಶ್, ರಾಜೇಗೌಡ, ಗೋಕುಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net