ಕೆರೆ ನೀರು ತುಂಬಿಸಲು ರು.೩೪೩ ಕೋಟಿ

B.G.PATIL
Published on

ಕಲಬುರಗಿ: ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿನ ೧೮ ಕೆರೆಗಳನ್ನು ತುಂಬಿಸಲು ಮೂರು ಯೋಜನೆಗಳನ್ನು ರೂಪಿಸಿದ್ದು, ಅದಕ್ಕಾಗಿ ೩೪೩ ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ ಒದಗಿಸಿರುವ ಅನುದಾನದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ. ತಾಂತ್ರಿಕ ಶಕ್ಯತೆ ಮತ್ತು ಅನುದಾನ ಲಭ್ಯತೆಗನುಸಾರ ವಿಶೇಷ ಪ್ಯಾಕೇಜ್ ಘೋಷಿಸಲು ಕ್ರಮ ವಹಿಸಲಾಗುತ್ತದೆ. ಮುಂಬರುವ ಬಜೆಟ್‌ನಲ್ಲಿ ಇಲಾಖೆಗೆ ಲಭ್ಯ ಅನುದಾನ, ಕೆರೆಗಳನ್ನು ತುಂಬಿಸುವ ಯೋಜನೆಗಳ ತಾಂತ್ರಿಕ, ಆರ್ಥಿಕ ಸಾಧ್ಯತೆ ಪರಿಶೀಲಿಸಿ, ಕೆರೆ ತುಂಬಿಸುವ ಯೋಜನೆಗಳಿಗೆ ಅನುದಾನ ಒದಗಿಸಲು ಪ್ರಸ್ತಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net