ಕೆರೆ ಹೂಳೆತ್ತುವ ಕಾಮಗಾರಿ ಆರಂಭ

19blrp2
Published on

ಬೇಲೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕಿನ ತೊಳಲು ಗ್ರಾಪಂ ವ್ಯಾಪ್ತಿಯ ಕೋನೇರ‌್ಲು ಗ್ರಾಮದ ದ್ಯಾವನಕೆರೆಯ 486ನೇ ನಮ್ಮೂರು ನಮ್ಮ ಕೆರೆ ಹೂಳೆತ್ತುವ ಕಾರ್ಯಕ್ಕೆ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಂ ಚಾಲನೆ ನೀಡಿದರು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ಕೆರೆಗಳ ಪುನಶ್ಚೇತನ ಗೊಳಿಸುವುದಕ್ಕೆ ಸಂಕಲ್ಪ ಮಾಡಿದ್ದು, ಇಲ್ಲಿವರೆಗೂ 485 ಕೆರೆಗಳ ಹೂಳೆತ್ತುವ ಮೂಲಕ ಪುನಶ್ಚೇತನಗೊಳಿಸಿದ್ದೇವೆ. ಕೋನೇರ‌್ಲು ಕೆರೆ 486ನೇ ಕೆರೆಯಾಗಿದೆ. ಈ ಗ್ರಾಮದ ಕೆರೆ 4 ಎಕರೆ ಭೂ ವಿಸ್ತಾರವಿದ್ದು, ಗ್ರಾಮದಲ್ಲಿ 200 ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದಾರೆ. 7 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುತ್ತಿದೆ. ಕೆರೆ ಪುನಶ್ಚೇತನದ ನಂತರ 500 ರೈತರಿಗೆ, ಸಾವಿರಕ್ಕೂ ಹೆಚ್ಚು ಜಾನುವಾರುಗಳಿಗೆ ಸದುಪಯೋಗವಾಗುವುದರಿಂದ ಅಂತರ್ಜಲ ಮಟ್ಟ ಹೆಚ್ಚುವುದರಿಂದ ಪರಿಸರವೂ ಸಹ ಉತ್ತಮವಾಗುತ್ತದೆ ಎಂದರು.
ಜಿಲ್ಲಾ ಯೋಜನಾ ನಿರ್ದೇಶಕಿ ಮಮತಾ ರಾವ್, ತಾಲೂಕು ಯೋಜನಾಧಿಕಾರಿ ಸಂಧ್ಯಾಶೆಟ್ಟಿ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್, ತೊಳಲು ಗ್ರಾಪಂ ಅಧ್ಯಕ್ಷ ಚಂದ್ರೇಗೌಡ, ಕೆರೆ ವಿಭಾಗದ ಪ್ರಾದೇಶಿಕ ಇಂಜಿನಿಯರ್ ಸುರೇಶ್, ಮಂಜೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net