ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಸೂಚನೆ

ಕೆರೆಗಳ ಒತ್ತುವರಿ ತೆರವಿಗೆ ಡಿಸಿ ಸೂಚನೆ
Published on

ಹಾಸನ: ಸರ್ಕಾರದ ಆಸ್ತಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆರೆಗಳ ಒತ್ತುವರಿವನ್ನು ತೆರವು ಗೊಳಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೆರೆಗಳ ಅಭಿವೃದ್ಧಿ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿ, ಕೆರೆಗಳ ಬೌಂಡರಿ ಗುರುತಿಸಿ ಜೊತೆಗೆ ವಿಸ್ತೀರ್ಣ ಕುರಿತು ದಾಖಲೆಗಳಲ್ಲೂ ಸರಿಪಡಿಸಿ, ಜತೆಗೆ ಕೆರೆಗಳ ಅಭಿವೃದ್ಧಿ ಕುರಿತು ಮಾರ್ಚ್ 20 ಕ್ಕೆ ಪುನಃ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಸಬೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ರವಿಕಾಂತ್, ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್,ಅಪರ ಜಿಲ್ಲಾಧಿಕಾರಿ ಕೆ ಟಿ.ಶಾಂತಲಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಭೂದಾಖಲೆಗಳ ಇಲಾಖೆ ಉಪ ನಿರ್ದೇಶಕ ಸಂಜಯ್, ಉಪ ವಿಭಾಗಾಧಿಕಾರಿ ಶೃತಿ ಹಾಗೂ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net