ಕೆರೆಗಳಿಗೆ ಶೀಘ್ರ ನೀರು ತುಂಬಿಸಲು ಸೂಚನೆ

MAYAKONDA- CONGRESS- K.S. BASAVARAJAPPA (4)
Published on

ದಾವಣಗೆರೆ: 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಎರಡು ತಿಂಗಳು ತಡವಾಗಿದೆ. ಶೀಘ್ರ ಕಾಮಗಾರಿ ಪ್ರಾರಂಭಿಸಿ ಎಲ್ಲ ಕೆರೆಗಳಿಗೂ ನೀರು ತುಂಬಿಸುವ ವ್ಯವಸ್ಥೆ ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ನೀರಾವರಿ ನಿಗಮದ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
22 ಕೆರೆಗಳ ಏತ ನೀರಾವರಿ ಹೋರಾಟ ಸಮಿತಿಯಿಂದ ಹರಿಹರ ಹೊಳೆ ಹತ್ತಿರದ ಜಾಕ್‌ವೆಲ್ 1ರ ಬಳಿ (ರಾಜನಹಳ್ಳಿ) ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಸನ್ಮಾನಿತರಾಗಿ ಮಾತನಾಡಿದರು.
ಕೆರೆಗಳಿಗೆ ನೀರು ತಂಬಿಸುವ ಕಾಮಗಾರಿಗೆ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಮುಂದಿನ ಬಜೆಟ್‌ನಲ್ಲಿ ಹೊಸ ಪೈಪ್‌ಲೈನ್ ಅಳವಡಿಸಲು ಅನುದಾನ ಮಂಜೂರಾತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಿರಿಗೆರೆ ಶ್ರೀಗಳ ಮಾರ್ಗದರ್ಶನದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮುದೇಗೌಡ್ರ ಗಿರೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲ ಕೆರೆಗಳಿಗೂ ಸಮರ್ಪಕವಾಗಿ ನೀರು ತುಂಬಿಸಲು ಹಾಗೂ ಕೊಡಗನೂರು ಕೆರೆಗೆ ಹೋಗುವ ಪೈಪ್‌ಲೈನ್ ಮಾರ್ಗ ಬದಲಾಯಿಸಲು ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದರು.
ಸಭೆಯಲ್ಲಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಲ್. ಕೊಟ್ರೇಶ್‌ನಾಯ್ಕ ಹುಲಿಕಟ್ಟೆ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಪ್ಪ, ಕಿತ್ತೂರು ವೀರಣ್ಣ, ಕಂದನಕೋವಿ ನಿಜಲಿಂಗಪ್ಪ, ರೇವಣಸಿದ್ದಪ್ಪ, ಕಾರ್ಯದರ್ಶಿಗಳಾದ ಶಿವಕುಮಾರ ತುಪ್ಪದಹಳ್ಳಿ, ನರೇಂದ್ರಬಾಬು ಹೆಬ್ಬಾಳು, ಚಂದ್ರನಾಯ್ಕ ಹಾಲೇಕಲ್ಲು, ಹೆಮ್ಮನಬೇತೂರು ತಿಪ್ಪೇಸ್ವಾಮಿ, ಸಿದ್ದನೂರು ಮಂಜಣ್ಣ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net