

ಚಾಮರಾಜನಗರ: ಯಳಂದೂರು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಕೆರೆಗಳ ಅಂಗಳದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನದ ಅಂಗವಾಗಿ ರಾಷ್ಟ್ರಧ್ವಜ ಹಾರಿಸಲಾಯಿತು.
ಅಮೃತ ಸರೋವರ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿದ ಕೆರೆಗಳ ಅಂಗಳದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ತಾಲೂಕಿನ 10 ಕೆರೆಗಳನ್ನು ಇದಕ್ಕೆಂದು ಆಯ್ಕೆ ಮಾಡಲಾಗಿದ್ದು, ದುಗ್ಗಹಟ್ಟಿ, ಬಿಳಿಗಿರಿರಂಗನಬೆಟ್ಟ ಗ್ರಾಪಂ ಹೊರತುಪಡಿಸಿ ಉಳಿದೆಲ್ಲೆಡೆ ಧ್ವಜ ಹಾರಿಸಲಾಯಿತು.
ಅಂಬಳೆ ಪಂಚಾಯಿತಿ ಪಿಡಿಒ ಮಮತಾ ಮಾತನಾಡಿ, ಅಮೃತ ಸರೋವರ ಯೋಜನೆಯಡಿ ಈ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ನಿಜಕ್ಕೂ ಇದೊಂದು ಅದ್ಭುತ ಕಲ್ಪನೆಯಾಗಿದು,್ದ ಕೆರೆಗಳನ್ನು ರಕ್ಷಿಸುವ ಜತೆಗ ಪರಿಸರ ಜಾಗೃತಿಯನ್ನು ಸಹ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಇದನ್ನು ಮಾದರಿಯಾಗಿಟ್ಟುಕೊಂಡು ಇತರೆ ಕೆರೆಗಳನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ತಿಳಿಸಿದರು.