ಕೆಲ ದಿನಗಳಲ್ಲಿ ನೂರರಷ್ಟು ತಲುಪಲಿದೆ

24 YERRISWAMY 07
Published on

ಬಳ್ಳಾರಿ : ಜಿಲ್ಲೆಯಲ್ಲಿ ರೈತರ ಜಮೀನಗಳ ಪಹಣಿಗಳಿಗೆ ಆಧಾರ್ ಲಿಂಕ್ ಜೋಡಣೆ ಶೇ.78 ರಷ್ಟು ಪೂರ್ಣಗೊಂಡಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.
ನಗರದ ಅತಿಥಿಗೃಹದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇನ್ನೂ ಆಧಾರ್ ಲಿಂಕ್ ಜೋಡಣೆಯಿದ್ದು, ಕೆಲವೇ ದಿನಗಳಲ್ಲಿ ಶೇ. ನೂರರಷ್ಟು ಪೂರ್ಣಗೊಳ್ಳಲಿದೆ. ಮೃತಪಟ್ಟವರ ಹೆಸರಿನಲ್ಲಿದ್ದ ಜಮೀನುಗಳನ್ನು ಪೋಡಿ ಮಾಡಿ ಲಿಂಕ್ ಮಾಡುವ ಅಭಿಯಾನ ನಡೆಯಲಿದೆ. ಇದರಿಂದ , ನಕಲಿ ದಾಖಲೆ ಸೃಷ್ಟಿಸಿ ನೋಂದಾಣಿ ಮಾಡುವುದು ತಪ್ಪಲಿದೆ. ಜಿಲ್ಲೆಯಲ್ಲಿ ಫಸಲ್ ಭಿಮಾ ಯೋಜನೆಯಡಿ ರೈತರು ತಮ್ಮ ಮುಂಗಾರು ಬೆಳೆಗೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಮುಂಬರುವ ಮಳೆಗಾಲದ ಪ್ರವಾಹ ಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಜಿಲ್ಲೆಯಲ್ಲಿ 114 ಡೆಂೆ ಪ್ರಕರಣಗಳು ಪತ್ತೆಯಾಗಿದ್ದು, 23 ಪ್ರಕರಣಗಳು ಸಕ್ರಿಯವಾಗಿವೆ. ಉಳಿದವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಯಾವುದೇ ಡೆಂೆಯಿಂದ ಸಾವು ಸಂಭವಿಸಿಲ್ಲ ಎಂದು ಮಾಹಿತಿ ನೀಡಿದರು. ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಎಡಿಸಿ ಮೊಹಮ್ಮದ್ ಝಬೇರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net