

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಕಾಲೇಜಿನಲ್ಲಿ ಭ್ರಷ್ಟಚಾರಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಕೆಲವು ವೈದ್ಯರು ಕಾಲೇಜಿಗೆ ಕೆಟ್ಟ ಹೆಸರು ತರಲು ಮುಂದಾಗಿದ್ದು, ಅಂತವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯ ಪರ್ವತ್ ರಾಜ್ ಆರೋಪಿಸಿದರು.
ಸಿಮ್ಸ್ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾಗಿ ಡಾ.ಎಚ್.ಜಿ.ಮಂಜುನಾಥ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಉತ್ತಮ ಗುಣಮಟ್ಟದ ಸಿಟಿ ಸ್ಕಾೃನಿಂಗ್, ಎಂಆರ್‌ಐ ಸ್ಕಾೃನಿಂಗ್ ಸೇವೆ ಕಲ್ಪಿಸಲಾಗಿದೆ. ಅತ್ಯಾಧುನಿಕ ತುರ್ತು ಚಿಕಿತ್ಸಾ ಘಟಕ, ಯಕೋ ಪರೀಕ್ಷೆ, ಗರ್ಭಿಣಿಯರಿಗೆ ಸರ್ಜಿಕಲ್ ಐಸಿಯು, ಟ್ರಾಮಾ ಕೇರ್ ಸೆಂಟರ್ ನಿರ್ಮಾಣ ಹಾಗೂ ಇನ್ನಿತರೆ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇದನ್ನು ಸಹಿಸಲಾಗದ ಕೆಲವು ವೈದ್ಯರು ಗುಂಪುಗಾರಿಕೆಯನ್ನು ನಡೆಸಿ ಅನಾವಶ್ಯಕವಾಗಿ ತೊಂದರೆಯನ್ನು ಕೊಡುತ್ತಿದ್ದಾರೆ. ಇಂತವರಿಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳಂಕ ಉಂಟಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಸಿಮ್ಸ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡಲು ಹಂತಹಂತವಾಗಿ ಪ್ರಯತ್ನ ಮಾಡುತ್ತಿದ್ದು, ಲಾ್ಯೆ್ರೆೆಸ್ಕೋಫಿ ಯಂತ್ರಗಳನ್ನು ಆಸ್ಪತ್ರೆಗೆ ತರಿಸಿದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಸಾಮಾನ್ಯ ಶಸಚಿಕಿತ್ಸಾ ವಿಭಾಗದ ಮುಖ್ಯಸ್ಥ ಮತ್ತು ಸಿಮ್ಸ್ ಆಡಳಿತಾಧಿಕಾರಿ ನಿರಂತರವಾಗಿ ಭ್ರಷ್ಟಚಾರದಲ್ಲಿ ತೊಡಗಿದ್ದು, ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಆಸ್ಪತ್ರೆಯ ಅಭಿವೃದ್ಧಿ ಹಾಗೂ ಬಡ ರೋಗಿಗಳಿಗೆ ಇವರು ಮಾರಕವಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರಿಂದ ಪತ್ರಗಳನ್ನು ಹಾಕಿಸಿ, ಸಿಮ್ಸ್‌ನ ಇನ್ನಿತರೆ ವೈದ್ಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಈ ನಿಟ್ಟಿನಲ್ಲಿ ಸಿಮ್ಸ್ ಆಸ್ಪತ್ರೆಯಲ್ಲಿ ಉತ್ತಮ ಆಡಳಿತ ನಡೆಸಲು ತೊಂದರೆ ನೀಡುವ ಮತ್ತು ಭ್ರಷ್ಟಚಾರದಲ್ಲಿ ಮುಳುಗಿರುವ ವೈದ್ಯರನ್ನು ವರ್ಗಾವಣೆ ಮಾಡಬೇಕು. ಅಂತವರ ವಿರುದ್ಧ ಮೇಲಾಧಿಕಾರಿಗಳು ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ಕನ್ನಡಪರ ಸಂಘಟನೆಯ ನಮ್ಮನೆ ಪ್ರಶಾಂತ್, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ್, ಮುಖಂಡ ವಾಸು ಹೊಂಡರಬಾಳು, ಮಹದೇವಸ್ವಾಮಿ, ಶಿವಪ್ರಸಾದ್, ಚೇತನ್, ಬಾಬು ರಾಮಸಮುದ್ರ ಹಾಜರಿದ್ದರು.