ಕೆಲಸಕ್ಕೆ ಅನಗತ್ಯ ವಿಳಂಬವಾದರೆ ಸಹಿಸಲ್ಲ

ydg3
ಸುರಪುರ ನಗರದ ತಹಸಿಲ್ ಕಚೇರಿಯಲ್ಲಿ ಲೋಕಾಯುಕ್ತ ಇಲಾಖೆಯಿಂದ ಶುಕ್ರವಾರ ಕರೆದಿದ್ದ ಸಾರ್ವಜನಿಕ ಕುಂದುಕೊರತೆ ಸಭೆ ನಡೆಯಿತು.
Published on

ಸುರಪುರ: ಸರ್ಕಾರಿ ಕಚೇರಿಗೆ ಸಾರ್ವಜನಿಕರು ಬಂದಾಗ ನ್ಯಾಯಯುತವಾದ ಕೆಲಸಕ್ಕೆ ಅನಗತ್ಯವಾಗಿ ವಿಳಂಬ ಮಾಡುವವರ ವಿರುದ್ಧ ದೂರು ನೀಡಿದರೆ ತಕ್ಕ ಕ್ರಮ ಕೈಗೊಳ್ಳಲು ಕರ್ನಾಟಕ ಲೋಕಾಯುಕ್ತ ಕಚೇರಿಗೆ ವರದಿ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಸಿದ್ದರಾಜು ಬಳುರುಗಿ ಹೇಳಿದರು.

ನಗರದ ತಹಸಿಲ್ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಜನರಿಗೆ ಅನಗತ್ಯವಾಗಿ ಕಿರುಕುಳ ನೀಡುವಂತಿಲ್ಲ. ಸರ್ಕಾರಿ ಹುದ್ದೆ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ಮಾಡುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ತಹಸೀಲ್ದಾರ್ ಎ.ಎಚ್. ಸರಕಾವಸ್, ತಾಪಂ ಇಒ ಬಸವರಾಜ ಸಜ್ಜನ್, ಟಿಎಚ್‌ಒ ಡಾ. ಆರ್.ವಿ. ನಾಯಕ, ಪೌರಾಯುಕ್ತ ಜೀವನ್ ಕಟ್ಟಿಮನಿ, ಲೋಕಾಯುಕ್ತ ಸಿಬ್ಬಂದಿ ಮಹ್ಮದ್ ಅಭೀದ್, ಸತೀಶಕುಮಾರ, ವಿನಯಕುಮಾರ, ವಿಕಾಸ ಇತರರಿದ್ದರು. ಒಟ್ಟು 12 ಅರ್ಜಿ ಸ್ವೀಕರಿಸಿದ್ದು, ಸಂಬAಧಿಸಿದ ಇಲಾಖೆ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net