

ಚಿತ್ರದುರ್ಗ: ನಿತ್ಯದ ಕಾಯಕದ ಜತೆಗೆ ಆರೋಗ್ಯದ ಕಡೆಗೆ ಎಲ್ಲರೂ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್‌ವಾಸುದೇವ ಹೇಳಿದರು.
ಜಿಲ್ಲಾ ನ್ಯಾಯಾಂಗ, ಆಯುಷ್ ಇಲಾಖೆಗಳು ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ನಗರದ ವಕೀಲರ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಉಚಿತ ಶಿಬಿರದಲ್ಲಿ ಮಾತನಾಡಿ, ಸಮರ್ಪಕ ರೀತಿಯಲ್ಲಿ ಕರ್ತವ್ಯ ನಿರ್ವಹಣೆಗೆ ಆರೋಗ್ಯ ಉತ್ತಮವಾಗಿರಬೇಕು ಎಂದು ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ ನಾಗಸಮುದ್ರ ಮಾತನಾಡಿ, ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಮ ನವಿ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಮಾತನಾಡಿ, ಇಂದಿನ ಒತ್ತಡದ ಬದುಕು ಹಾಗೂ ಜೀವನಶೈಲಿ ಜನ್ಯ ವ್ಯಾಧಿಗಳಿಗೆ ಆಯುಷ್ ಚಿಕಿತ್ಸೆ ಉತ್ತಮ ವೈದ್ಯ ಪದ್ಧತಿಯಾಗಿದೆ ಎಂದುಬ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಇದ್ದರು. ಆಯುಷ್ ವೈದ್ಯಾಧಿಕಾರಿ ಡಾ. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ನಾರದಮುನಿ ಸ್ವಾಗತಿಸಿದರು. ಡಾ. ನಾಗರಾಜ್‌ನಾಯ್ಕ ವಂದಿಸಿದರು. ಸಂಘದ ಕಾರ್ಯದರ್ಶಿ ಗಂಗಾಧರ್ ನಿರೂಪಿಸಿದರು.