ಕೇಂದ್ರ ಆಡಳಿತ ಸೇವೆ ಪರೀಕ್ಷೆಗಳಿಗೆ ಮಹತ್ವ ನೀಡಲಿ

ಸಂಘ ುದ್ಘಾಟನೆ
ವೀರಶೈವ ಲಿಂಗಾಯತ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವನ್ನು ಶಂಕರ್ ಬಿದರಿ ಉದ್ಘಾಟಿಸಿದರು. ಶ್ರೀ ಸದಾಶಿವ ಸ್ವಾಮೀಜಿ, ಎಸ್.ಸೋಮಶೇಖರ್, ರಾಜಶೇಖರ, ಬಸವರಾಜು, ಎಚ್.ವಿ.ಶಿವಪ್ಪ ಇತರರು ಇದ್ದರು.
Published on

ಕುಶಾಲನಗರ: ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವುದು ಶ್ಲಾಘನೀಯ ಎಂದು ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಅಭಿಪ್ರಾಯಪಟ್ಟರು.

ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ವೀರಶೈವ ಲಿಂಗಾಯತ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಕರ್ನಾಟಕ ಲೋಕ ಸೇವಾ ಪರೀಕ್ಷೆಗಿಂತಲೂ ಕೇಂದ್ರ ಲೋಕಸೇವಾ ಪರೀಕ್ಷೆಗಳಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಉತ್ತಮ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ ಎಂದರು.

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಮಾತನಾಡಿದರು. ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಂದೀಶ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಲಿಂಗಾಯುತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಸೋಮಶೇಖರ್, ಸಂಘಟನಾ ಕಾರ್ಯದರ್ಶಿ ರಾಜಶೇಖರ, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಕೊಡಗು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಎಚ್.ವಿ.ಶಿವಪ್ಪ, ಕುಶಾಲನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಪಿರಿಯಾಪಟ್ಟಣ ತಾಲೂಕು ಶರಣ ಸಾಹಿತ್ಯ ವೇದಿಕೆ ಅಧ್ಯಕ್ಷ ಶಿವಯೋಗಿ, ಕುಶಾಲನಗರ ಠಾಣಾಧಿಕಾರಿ ಚಂದ್ರಶೇಖರ್, ಉದ್ಯಮಿ ಎಂ.ಎ.ರಘು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net