ಕೇಂದ್ರ ಗೃಹ ಸಚಿವ ಅಮಿತ್‌ಶಾ ಜತೆ ಚರ್ಚೆ,ವಿಜಯೇಂದ್ರ

CTD 20 BYV KADUGOLLA SAMUDAYA (1)--003
Published on

ಚಿತ್ರದುರ್ಗ: ಕಾಡುಗೊಲ್ಲ ಸಮುದಾಯದ ಬೇಡಿಕೆಗಳೆಡೆ ಪಕ್ಷದಲ್ಲಿ ಗಂಭೀರ ಚರ್ಚೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬೆಂಗಳೂರಿನ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಬುಧವಾರ ಕಾಡುಗೊಲ್ಲ ಸಮುದಾಯದ ಮುಖಂಡರ ನಿಯೋಗದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸ ಬೇಕೆಂಬ ಬೇಡಿಕೆ ಕುರಿತಂತೆ, ಶೀಘ್ರದಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು. ತಮ್ಮ ಮೀಸಲು ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಕಾಡುಗೊಲ್ಲ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲು ಸೌಲಭ್ಯ ಒದಗಿಸುವಂತೆ ಕೇಂದ್ರದ ಮೇಲೆ ಒತ್ತಡ ತರುವಂತೆ ಮುಖ ಂಡರು ವಿಜಯೇಂದ್ರ ಅವರಿಗೆ ಮನವಿ ಮಾಡಿದರು. ಹಿಂದುಳಿದ ಸಮುದಾಯದ ಪರ ದನಿ ಎತ್ತ ಬೇಕೆಂದು ಅವರನ್ನು ಒತ್ತಾಯಿಸಿದ ರು.
ಈ ಹಿಂದೆ ಕಾಡುಗೊಲ್ಲ ಸಮುದಾಯದ ಕುರಿತು ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಮೀಸಲು ಸೌಲಭ್ಯಕ್ಕಾಗಿ ರಾಜ್ಯಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೀಗ ಕಾಡುಗೊಲ್ಲರ ಮೀಸಲಾತಿ ಪ್ರಸ್ತಾವನೆ ಕೇಂದ್ರದ ಮುಂದಿದ್ದು, ಸಮುದಾಯದ ಅಭಿವೃದ್ಧಿ ಗಾಗಿ ಎಸ್ಟಿ ಮೀಸಲು ಬೇಡಿಕೆಯನ್ನು ಕೇಂದ್ರ ಈಡೇರಿಸಬೇಕಿದೆ ಎಂದು ಮುಖಂಡರು ಹೇಳಿದರು.
ರಾಜ್ಯಕಾಡುಗೊಲ್ಲ ಸಂಘದ ಅಧ್ಯಕ್ಷ ರಾಜಣ್ಣ, ಚಿತ್ರದುರ್ಗ ಜಿಪಂ ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ, ಮುಖಂಡರಾದ ಶಂಕ್ರಪ್ಪ, ಬಸವರಾಜ್, ಸಣ್ಣಬಾಲಪ್ಪ, ಆರ್.ಕೆ.ಶ್ರೀನಿವಾಸ್, ಆದರ್ಶ, ಬೂದಿಹಳ್ಳಿರಾಜಣ್ಣ, ದೇವೇಂದ್ರಪ್ಪ, ಸುಂಕಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net