ಕೇಂದ್ರ ಸಂಪುಟದಲ್ಲಿ ಲಿಂಗಾಯತರು, ಅಹಿಂದ ವರ್ಗಕ್ಕೆ ಅನ್ಯಾಯ

CTD 4 H.ANJANEYA--004
Published on

ಚಿತ್ರದುರ್ಗ: ವೀರಶೈವ ಲಿಂಗಾಯತರು ಹಾಗೂ ಅಹಿಂದ ಸಮುದಾಯದವರು ಮತ ಹಾಕಲು ಅಷ್ಟೇ ಸೀಮಿತ, ಅಧಿಕಾರಕ್ಕೆ ಅಲ್ಲ ಎಂಬ ಬಿಜೆಪಿಯ ಮನಸ್ಥಿತಿ ಕೇಂದ್ರ ಸಂಪುಟ ರಚನೆಯಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಆರೋಪಿಸಿದ್ದಾರೆ.
ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಮುದಾಯದ ಸಂಸದರಿಗೆ ಕ್ಯಾಬಿನೆಟ್ ದರ್ಜೆ ಖಾತೆ ನೀಡಿಲ್ಲ. ಈ ಹಿಂದೆ ಬಿ. ಎಸ್.ಯಡಿಯೂರಪ್ಪರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದ ಬಿಜೆಪಿ, ಈಗ ಸಚಿವ ಸಂಪುಟ ರಚನೆ ವೇಳೆ ಹಳೆಯ ನಡೆ ಮುಂದುವರಿಸಿದೆ ಎಂದು ದೂರಿದ್ದಾರೆ.
ಮಾದಿಗ, ಭೋವಿ, ನಾಯಕ ಹಾಗೂ ಒಬಿಸಿ ವರ್ಗದ ಎನ್‌ಡಿಎ ಸಂಸದರಿಗೆ ಸಂಪುಟದಲ್ಲಿ ಸ್ಥಾನ ದೊರೆತಿಲ್ಲ. ಚುನಾವಣೆಯಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ. ಇದನ್ನು ಪ್ರಶ್ನಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನೇ ಉಚ್ಚಾಟಿಸಲಾಗಿದೆ. ಯಡಿಯೂರಪ್ಪ ವಿರುದ್ಧ ಇರುವಂಥವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
*ೇರಾವ್ ಎಚ್ಚರಿಕೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಈಗಲೂ ಅವರು ತಮ್ಮ ಅಸಹಕಾರದ ನಡೆಯನ್ನು ಮುಂದುವರಿಸಿದರೆ ರಾಜ್ಯ ಭೇಟಿ ವೇಳೆ ಅವರಿಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net