ಕೇಂದ್ರ ಸಚಿವರ ಪಲಾಯನವಾದದ ನಡೆ

CTD 1 NERALGUNTE RAMMAPPA----
Published on

ಚಿತ್ರದುರ್ಗ: ಅಧಿಕಾರ ಇದ್ದಾಗ ಕ್ಷೇತ್ರದ ಜನರಿಗೆ ಸ್ಪಂದಿಸದೆ, ಈಗ ಚುನಾವಣಾ ರಾಜಕಾರಣದೆಡೆ ನಿರಾಸಕ್ತಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರ ನಡೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರ‌್ಲಗುಂಟೆ ರಾಮಪ್ಪ ಟೀಕಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಚಿವರಾಗಿರುವ ತಾವು ಕ್ಷೇತ್ರದ ಅನೇಕ ಸಮಸ್ಯೆಗಳಿಗೆ ಪರಿಹಾರ ಹುಡುಕುವಲ್ಲಿ ವಿಫಲರಾಗಿದ್ದೀರಿ. ರೈಲ್ವೇ ಸೇತುವೆ ಕಾಮಗಾರಿ ಸಹಿತ ಅನೇಕ ಸಮಸ್ಯೆಗಳನ್ನು ಬಗೆಹರಿಸಿ ಕ್ಷೇತ್ರದ ಜನರ ಋಣ ತೀರಿಸುವ ಕೆಲಸ ಮಾಡಬೇಕಿತ್ತು ಎಂದರು.
ಅಧಿಕಾರಿಗಳು ಸ್ಪಂದಿಸಲಿಲ್ಲ, ಆದ್ದರಿಂದ ನಾನು ಮುಂದಿನ ಚುನಾವಣೆಗೆ ಸ್ಪರ್ಧಿಸಲು ಬಯಸುತ್ತಿಲ್ಲ ಎನ್ನುವುದು ಸಚಿವರು ಪಲಾಯನದ ಮಾತುಗಳು ಎಂದು ಆರೋಪಿಸಿದರು.
ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ನಜ್ಮಾತಾಜ್, ಯಶವಂತ, ಮುದಸಿರ್, ಶಬ್ಬೀರ್, ಎನ್.ಡಿ.ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net