ಕೇಂದ್ರ ಸಚಿವರು ಜವಾಬ್ದಾರಿ ಪ್ರದರ್ಶಿಸುತ್ತಿಲ್ಲ

CTD D BASVARAJ-004
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ 5300 ಕೋಟಿ ರೂ.ಅನುದಾನ ಈವರೆಗೂ ಬಿಡುಗಡೆಯಾಗಿಲ್ಲವೆಂದು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಮಾಜಿ ಅಧ್ಯಕ್ಷ ಡಿ.ಬಸವರಾಜ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅನುದಾನ ಬಿಡುಗಡೆಗೆ ಒತ್ತಾಯಿಸಿ ಹಾಗೂ ಯೋಜನೆ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲೆ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ಚಿತ್ರದುರ್ಗ ಸಂಸದ,ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅ ವರು,ಅನುದಾನ ಬಿಡುಗಡೆ ಮಾಡಿಸುವ ನಿಟ್ಟಿನಲ್ಲಿ ಜವಾಬ್ದಾರಿ ಪ್ರದರ್ಶಿಸುತ್ತಿಲ್ಲವೆಂದು ದೂರಿದರು.
ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಸಮಾಜಕ್ಕೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ವರಿಷ್ಠರಿಗೆ ಮನವಿ ಮಾ ಡುವುದಾಗಿ ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯಕ್ಕೆ ಏಳು ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿದ್ದರೂ,ನಾಲ್ಕರಲ್ಲಿ ಅವಕಾಶ ದೊರೆಯಿ ತು ಎಂದ ಅವರು,ಭೋವಿ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಗಾಡ್‌ಫಾದರ್.ಸಚಿವ ಎಚ್. ಸಿ.ಮಹದೇವಪ್ಪ ಅವರಿಗೂ ಟಿಕೆಟ್ ಕೋರಿ ಮನವಿ ಮಾಡಿದ್ದೇನೆ.
ಕೆಪಿಸಿಸಿ ಕಾರ‌್ಯಾಧ್ಯಕ್ಷ ಸಲೀಂಅಹ್ಮದ್,ಸಚಿವ ಶಿವರಾಜ್‌ತಂಗಡಗಿ ಅವರು ಸಮುದಾಯದ ನೆರವಿಗೆ ನಿಲ್ಲಬೇಕೆಂದು ಕೋರಿದರು. ನಮ್ಮ ಸಮುದಾಯಕ್ಕೆ ಲೋಕಸಭೆಗೆ ಟಿಕೆಟ್ ಕೊಡಲು ಸಾಧ್ಯವಾಗದಿದ್ದರೆ,ವಿಧಾನ ಪರಿಷತ್‌ನ 11 ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಸಮುದಾಯಕ್ಕೆ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಸಿಎಂ,ಡಿಸಿಎಂ ಅವರನ್ನು ಒತ್ತಾಯಿಸುವುದಾಗಿ ಹೇಳಿದರು.
ವಕೀಲ ವೆಂಕಟೇಶ್,ಎನ್.ವಿ.ಅಂಜನಪ್ಪ,ರಾಜು,ದಾದಾಪೀರ್,ಬಿ.ವಿನಾಯಕ,ರಹಂಮಾನ್‌ಸಾಬ್,ಗಣೇಶ್,ಮಂಜನಾಯ್ಕ,ಟಿ. ವೀರೇಶ್,ಶಂಕರ್,ಬಿ.ಎಸ್.ಸುರೇಶ್,ಬಿ.ಶಿವಕುಮಾರ್,ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net