ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

26 YERRISWAMY 03
Published on

ಬಳ್ಳಾರಿ : ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಯೋಜನೆ ಘೋಷಣೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕ್ರಮ ಖಂಡಿಸಿ, ಇಲ್ಲಿನ ಗಡಗಿ ಚೆನ್ನಪ್ಪ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟಿಸಲಾಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ ಮಾತನಾಡಿ, ಕೇಂದ್ರ ಸರ್ಕಾರವೇ ಸಂವಿಧಾನಿಕವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ಹಿಂದುಳಿದ ಪ್ರದೇಶಗಳೆಂದು ಹತ್ತು ವರ್ಷಗಳ ಹಿಂದಯೇ ಘೋಷಿಸಿದೆ. ಈ ಬಜೆಟ್‌ನಲ್ಲಿ ಈ ಜಿಲ್ಲೆಗಳಿಗೆ ವಿಶೇಷ ಅನುದಾನ ನೀಡಿಲ್ಲ ಎಂದು ಕಿಡಿಕಾರಿದರು. ದೇಶದಲ್ಲಿ ಕಳೆದ 10 ವರ್ಷಗಳಿಂದ ಸುಮಾರು ಏಳು ಸಾವಿರ ಪ್ರಕರಣವನ್ನು ದಾಖಲಿಸಿರುವ ಇಡಿ ಅಧಿಕಾರಿಗಳು ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ. ಯಾವೊಂದು ಪ್ರಕರಣವೂ ತಾರ್ಕಿಕ ಅಂತ್ಯ ಕಂಡಿಲ್ಲ. ಕೇವಲ ಪ್ರತಿಪಕ್ಷಗಳ ನಾಯಕರಿಗೆ ಬೆದರಿಕೆಯ ತಂತ್ರವಾಗಿದೆ. ಇಡಿ ದಾಳಿಗೆ ಒಳಗಾದವರು ಬಿಜೆಪಿ ಸೇರಿದರೆ ವಾಷಿಂಗ್ ಪೌಡರ್‌ಯಾಗಿ ನಿರ್ಮಾಣವಾಗಲಿದ್ದಾರೆ ಎಂದು ಲೇವಡಿ ಮಾಡಿದರು.
ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದೆ ಎಂದು ಚೊಂಬು ಪ್ರದರ್ಶಿಸಿ ಅಸಮಾಧಾನ ವ್ಯಕ್ಯಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net