ಕೇಂದ್ರ ಸರ್ಕಾರದ ಮಲತಾಯಿ ಧೋರಣೆ

bkt-27-4
ಬಾಗಲಕೋಟೆ ನಗರದ ಬಸವೇಶ್ವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಬಿಟಿಡಿಎ ಅಧ್ಯಕ್ಷ, ಶಾಸಕ ಎಚ್.ವೈ.ಮೇಟಿ, ಮಾಜಿ ಸಚಿವ ಉಮಾಶ್ರೀ, ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ, ಜಿ.ಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ ಇತರರು ಇದ್ದರು.
Published on

ಬಾಗಲಕೋಟೆ: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯವಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಟಿಡಿಎ ಅಧ್ಯಕ್ಷ, ಶಾಸಕ ಎಚ್.ವೈ.ಮೇಟಿ ಮಾತನಾಡಿ, ಕೇಂದ್ರದಲ್ಲಿ ಅಽಕಾರ ನಡೆಸುತ್ತಿರುವ ಬಿಜೆಪಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಬಿಜೆಟ್‌ನಲ್ಲಿ ರಾಜ್ಯಕ್ಕೆ ಶೂನ್ಯ ಸಿಕ್ಕಿದೆ. ಜನ ವಿರೋಧಿ ಕಾನೂನು ರೂಪಿಸುತ್ತಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಮಲತಾಯಿ ಧೋರಣೆ ಮಾಡುವುದು ಸರಿಯಲ್ಲ. ಆಂಧ್ರಪ್ರದೇಶ, ಬಿಹಾರ ಅನುದಾನ ನೀಡುವ ಬಿಜೆಪಿ ಸರ್ಕಾರ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಮಾತನಾಡಿ, ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡಿ ಇತರ ರಾಜ್ಯಗಳಿಗೆ ಏನು ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ ೧೭ ಸಂಸದರು, ಸಚಿವರು ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ಕನ್ನಡಿಗರ ಋಣ ತೀರಿಸುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿ, ಕೇಂದ್ರದಲ್ಲಿ ಅಽಕಾರ ನಡೆಸುತ್ತಿರುವ ಬಿಜೆಪಿಗೆ ಒಡೆದಾಳುವ ನೀತಿ ರೂಢಿಸಿಕೊಂಡಿದೆ. ಈ ಹಿಂದೆ ಅತೀ ಹೆಚ್ಚು ಸಂಸದರನ್ನು ಗೆಲ್ಲಿಸಿದರು ರಾಜ್ಯಕ್ಕೆ ಏನು ಕೊಡುಗೆ ನೀಡಲಿಲ್ಲ. ಈ ಸಾರಿ ಜನ ಅವಕಾಶ ನೀಡಿದರು ಹಿತ ಕಾಯುತ್ತಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ, ಭದ್ರ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ಯಾವುದೇ ನೀರಾವರಿ, ಶಿಕ್ಷಣ, ಉದ್ಯೋಗ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಹುದ್ದೆ ಉಳಿಸಿಕೊಳ್ಳಲು ಬಿಹಾರ, ಆಂಧ್ರಪ್ರದೇಶಕ್ಕೆ ಮಣೆ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ, ಜಿ.ಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ಮಂಜುಳಾ ಭೋಸಾರೆ, ಹನುಮಂತ ರಾಕುಂಪಿ, ರಜಾಕ ಬೆಣೂರ, ರಾಜು ಮನ್ನಿಕೇರಿ, ಮಹಾಂತೇಶ ಹಟ್ಟಿ, ಜಾಫರ್ ಬೇಪಾರಿ, ಅಯ್ಯುಬ ಪುಣೇಕಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net