ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Oplus_131072
Oplus_131072
Published on

ನಂಜನಗೂಡು: ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಮಂಗಳವಾರ ಶಾಸಕ ದರ್ಶನ್ ಧ್ರುವನಾರಾಯಣ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಮೈಸೂರು-ಗುಂಡ್ಲುಪೇಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹುಲ್ಲಹಳ್ಳಿ ವೃತ್ತದಲ್ಲಿ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಸೌದೆ ಒಲೆಯಲ್ಲಿ ಅಡುಗೆ ಅಣುಕು ಪ್ರದರ್ಶನ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಕೇಂದ್ರ ಸರ್ಕಾರವು ಜನ ಸಾಮಾನ್ಯರು ದಿನನಿತ್ಯ ಬಳಸುವ ಅಗತ್ಯ ವಸ್ತುಗಳಾದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು, ಇದರಿಂದಾಗಿ ದ್ವಿಚಕ್ರ ಹಾಗೂ ಭಾರಿ ವಾಹನ ಸವಾರರಿಗೆ, ಸಾರ್ವಜನಿಕರಿಗೆ ತೊಂದರೆಯಾಗಿದೆ. ವಾಹನಗಳನ್ನು ಬಿಟ್ಟು ಸೈಕಲ್ ತುಳಿಯುವ ಸನ್ನಿವೇಶ ಏರ್ಪಟ್ಟಿದೆ ಎಂದರು.

ನಿತ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ ಎಂದರು.

ತಹಸೀಲ್ದಾರ್ ಶಿವಕುಮಾರ್ ಕಾಸನೂರು ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಲಾಯಿತು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಮಾರುತಿ, ಹಿರೇಹಳ್ಳಿ ಸೋಮೇಶ್, ನಾಗೇಶ್‌ರಾಜ್, ಇಂದನ್ ಬಾಬು, ಚಂದನ್ ಗೌಡ, ವಿಜಯ್ ಕುಮಾರ್, ಹಾಡ್ಯ ಆದರ್ಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net