ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಿ; ತಹಸೀಲ್ದಾರ್‌ಗಳಿಗೆ ಡಿಸಿ ಕೆ.ಎಸ್.ಲತಾ ಕುಮಾರಿ ಸೂಚನೆ

03_HSN_01
Published on

ಹಾಸನ: ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಯಾವುದೇ ದೂರುಗಳು ಬರದಂತೆ ನಿಗಾವಹಿಸಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಭೆ ನಡೆಸಿ ಮಾತನಾಡಿದ ಅವರು ಕೆಲವು ಕಡೆ ಗಮನಿಸಿದಾಗ ವೃದ್ಧಾಪ್ಯ ಮತ್ತು ವಿಧವಾ ಪಿಂಚಣಿ ಬರುವುದು ನಿಂತಿದೆ ಎಂದು ಕೇಳಿ ಬಂದಿದೆ. ಇದರ ಬಗ್ಗೆ ಹೆಚ್ಚಿನ ಗಮನಹರಿಸಿ ಪರಿಶೀಲನೆ ಮಾಡಿ ಸರಿಪಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೌತಿ ಖಾತೆ ಆಂದೋಲನ ನಡೆಸುವುದರ ಜತೆಗೆ ದರಖಾಸ್ತು ಪೋಡಿಗೆ ಒತ್ತು ನೀಡಿ ಎಂದರಲ್ಲದೆ, ಆರ್‌ಟಿಸಿ ತಿದ್ದುಪಡಿ, ಇ-ಸ್ವತ್ತು ಬಾಕಿ ಇರುವುದನ್ನು ಪೂರ್ಣಗೊಳಿಸಿ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿಗೆ ಸ್ಥಳಾವಕಾಶ ಕಲ್ಪಿಸುವುದರ ಜತೆಗೆ ಇ-ಆಫೀಸ್‌ನಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಕಾರ್ಯ ನಿರ್ವಹಿಸಲು ಕ್ರಮ ವಹಿಸುವಂತೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net