ಕೇಂದ್ರದ ನೆರವಿನಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ

06-GPT-1
ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಿರಂಜನಕುಮಾರ್ ಮತಯಾಚನೆ ಮಾಡಿದರು. ಮುಖಂಡ ಬಾಬು ಹಾಗೂ ಇತರರು ಇದ್ದರು.
Published on

ಗುಂಡ್ಲುಪೇಟೆ: ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಕೇಂದ್ರದ ನೆರವಿನಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಪಟ್ಟಣದ ಪಕ್ಷದ ಕಚೇರಿಯಲ್ಲಿ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ಮೋರ್ಚಾಗಳ ಪದಾಧಿಕಾರಿಗಳೊಂದಿಗೆ ಅವರು ಮಾತನಾಡಿದರು. ಕಳೆದ ಬಾರಿ ಕ್ಷೇತ್ರದ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿದ್ದರಿಂದ ನಾನು ಜಯಗಳಿಸಲು ಸಾಧ್ಯವಾಗಿತ್ತು. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ 800 ಕೋಟಿ ರೂ.ವೆಚ್ಚದಲ್ಲಿ ಪೂರಕವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಹಿಂದುಳಿದ ಗ್ರಾಮಗಳಿಗೆ ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರು, ಎಲ್ಲ ವರ್ಗಗಳ ಜನತೆಯ ಬೇಡಿಕೆಗನುಸಾರ ಸಮುದಾಯ ಭವನಗಳ ನಿರ್ಮಾಣ ಹಾಗೂ ರೈತಾಪಿ ಜನರ ಬಹುದಿನದ ಬೇಡಿಕೆಯಾದ ಸರ್ಕಾರಿ ಭೂಮಿ ಉಳುಮೆ ಮಾಡುತ್ತಿದ್ದ 2 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ, ವಸತಿ ಯೋಜನೆಯ ಫಲಾನುಭವಿಗಳಿಗೆ ನಿವೇಶನ ಹಂಚಿಕೆ, ಎಲ್ಲ ಕೆರೆಗೆ ನೀರು ತುಂಬಿಸುವ ಯೋಜನೆನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಎಲ್ಲ ವರ್ಗಗಳ ಜನರ ಬಹುತೇಕ ಬೇಡಿಕೆಗಳನ್ನು ಈಡೇರಿಸಲಾಗಿದೆ. ಇದರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೆರವಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರಗಳ ಜನಪರ ಕೆಲಸಗಳು ಜನರ ಮೆಚ್ಚುಗೆಗೆ ಪಾತ್ರವಾಗಿದ್ದು ಬಿಜೆಪಿಗೆ ಮತನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ನಿರಂಜನಕುಮಾರ್ ಪರವಾಗಿ ಅವರ ಪುತ್ರ ಭುವನ್ ಕುಮಾರ್ ಪಟ್ಟಣದ ಜಾಕೀರ್ ಹುಸೇನ್ ನಗರ, ಮಹದೇವಪ್ರಸಾದ್ ನಗರ ಮುಂತಾದ ಪ್ರದೇಶಗಳಲ್ಲಿ ಮತಯಾಚನೆ ಮಾಡಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಿ.ಮಹದೇವಪ್ರಸಾದ್, ರೇವಣ್ಣ, ಮಾಧ್ಯಮ ಸಂಚಾಲಕ ಎಸ್.ಸಿ.ಮಂಜುನಾಥ್, ಕಲ್ಲಹಳ್ಳಿ ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net