ಕೇಂದ್ರದ ಯೋಜನೆಗಳ ಅನುಷ್ಠಾನಕ್ಕೆ ಒತ್ತಡ ಹಾಕಿ

Dasti
Published on

ಕಲಬುರಗಿ: ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ತಜ್ಞರ ನಿಯೋಗ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಭಾನುವಾರ ಭೇಟಿ ಮಾಡಿ ಕಲ್ಯಾಣ ಭಾಗದ ಸಮಗ್ರ ಅಭಿವೃದ್ಧಿ ಕಾಳಜಿ ವಹಿಸಿ ಎಂದು ಮನವಿ ಮಾಡಿತು.
ಸಮಿತಿಯ ಸಂಸ್ಥಾಪಕ ಅಧ್ಯP್ಷÀ ಲಕ್ಷö್ಮಣ ದಸ್ತಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಯೋಜನೆಗಳ ಅನುಷ್ಠಾನದ ಬಗ್ಗೆ ಶ್ರಮಿಸಬೇಕು. ಕಲಬುರಗಿಯ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ, ಜವಳಿ ಪಾರ್ಕ್ ಅನುಷ್ಠಾನ, ಕಲಬುರಗಿ ಎರಡನೇ ವರ್ತುಲ ರಸ್ತೆ, ಕಲ್ಯಾಣ ಪಥ ಹೆz್ದÁರಿ ರಸ್ತೆ, ಏಮ್ಸï ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಕೋರಿದರು.
ಪ್ರೊ.ಆರ್.ಕೆ. ಹುಡಗಿ ಮಾತನಾಡಿ, ಕಲಬುರಗಿಯಲ್ಲಿ ಒಂದು ದಿನದ ಬೃಹತ್ ಕಾರ್ಯಾಗಾರ ಹಮ್ಮಿಕೊಳ್ಳಲು ಸಮಿತಿ ನಿರ್ಧರಿಸಿದೆ. ಎಐಸಿಸಿ ಅಧ್ಯP್ಷÀ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕರ‍್ಯಾಗಾರ ಉದ್ಘಾಟಿಸಬೇಕೆಂಬುದು ಸಮಿತಿ ಒತ್ತಾಸೆ. ಕಲ್ಯಾಣ ಕರ್ನಾಟಕದ ಸಚಿವರು, ಸಂಸದರು, ಶಾಸಕರು ಸೇರಿ ಸಂಘ-ಸAಸ್ಥೆಗಳ ಅಧ್ಯP್ಷÀರು, ವಿಶೇಷವಾಗಿ ಏಳು ಜಿ¯್ಲÉಯ ಪರಿಣಿತ ವ್ಯಕ್ತಿಗಳನ್ನು ಆಹ್ವಾನಿಸಿ ೩೭೧ (ಜೆ) ಕಲಂ ಸಾಧಕ-ಬಾಧಕ ಬಗ್ಗೆ ಚರ್ಚಿಸಲಾಗುವುದು. ಅಲ್ಲದೆ ಪರಿಣಾಮಕಾರಿ ಅನುಷ್ಠಾನದ ಕ್ರಮ ಹಾಗೂ ಕಲ್ಯಾಣ ಕರ್ನಾಟಕದ ರಚನಾತ್ಮಕ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸುವ ಫಲಪ್ರದ ಐತಿಹಾಸಿಕ ವೇದಿಕೆಯಾಗಬೇಕು. ಇದಕ್ಕೆ ಸ್ಪಂದಿಸಬೇಕು ಹೇಳಿದರು.
ಸಂಸದ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ನೀವು ಹೇಳಿರುವ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಮಟ್ಟದಲ್ಲಿ ಒತ್ತಡ ತರಲಾಗುವುದು. ಈ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಕಲ್ಯಾಣ ಕರ್ನಾಟಕದ ಲೋಕಸಭಾ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರಮುಖರಾದ ಪ್ರೊ.ಬಸವರಾಜ ಕುಮನೂರ, ಪ್ರೊ.ಶಂಕ್ರೆಪ್ಪ ಹತ್ತಿ, ಡಾ.ಬಸವರಾಜ ಕಳಸಾ, ಡಾ.ಮಾಜಿದ್ ದಾಗಿ, ವಿನಾಯಕ ಪತ್ರಗಾರ, ಜಾನ್ ವಿಲ್ಸನ್, ರೌಫ್ ಖಾದ್ರಿ, ಅಸ್ಲಂ ಚೌಂಗೆ, ಶಿವಾನಂದ ಕಾಂದೆ, ಮಂಜೂರ್ ಡೆಕ್ಕನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net