ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

22Ravig8
ಕಾಂಗ್ರೆಸ್‌ನಿಂದ ಶುಕ್ರವಾರ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಎಂ.ಬಿ.ಪಾಟೀಲ, ಡಾ.ಅಂಜಲಿ ನಿಂಬಾಳ್ಕರ್, ವಿನಯ ಕುಲಕರ್ಣಿ, ಫಿರೋಜ್ ಸೇಠ್, ಆರ್.ಬಿ.ತಿಮ್ಮಾಪುರ ಇತರರಿದ್ದರು.
Published on

ಬೆಳಗಾವಿ: ಕೇಂದ್ರ ಸರ್ಕಾರವು ನೆಹರು-ಗಾಂಧಿ ಕುಟುಂಬದವರ ವಿರುದ್ಧ ಕೀಳು ರಾಜಕಾರಣ ಮಾಡುತ್ತಿದ್ದು, ರಾಜಕೀಯ ದ್ವೇಷದ ಕಾರಣಕ್ಕೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯ ಕುಲಕರ್ಣಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟಿಸಿದರು.

ನಗರದಲ್ಲಿನ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾರ್ಯಕರ್ತರು, ಬಿಜೆಪಿ ಸರ್ಕಾರ ದೇಶದ ಅತ್ಯುನ್ನತ ತನಿಖಾ ಸಂಸ್ಥೆಗಳನ್ನು ದುರುದ್ದೇಶಕ್ಕೆ ಬಳಸಿಕೊಳ್ಳುವುದಕ್ಕೆ ಕಡಿವಾಣ ಹಾಕಿ. ಯೋಗ್ಯ ಉದ್ದೇಶಕ್ಕೆ ಕಾರ್ಯನಿರ್ವಹಿಸಲು ಬಲಪಡಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕ ಫಿರೋಜ್ ಸೇಠ್, ಆರ್.ಬಿ.ತಿಮ್ಮಾಪುರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net