ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

H-C-Mahadevappa
Published on

ಮೈಸೂರು; ಅಕ್ಕಿ ನೀಡಲು ನಿರಾಕರಣೆ ಮಾಡಿರುವ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಜೂ.20ರಂದು ರಾಜ್ಯಾದ್ಯಂತ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ ಅಕ್ಕಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೋರಲಾಗಿತ್ತು. ಅದಕ್ಕೆ ಆರಂಭದಲ್ಲಿ ಸಮ್ಮತಿ ಸಹ ನೀಡಿತ್ತು. ಆದರೆ, ಕೊನೆ ಕ್ಷಣದಲ್ಲಿ ಕೈಕೊಟ್ಟಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ಮಂಗಳವಾರ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕಾರ್ಯನಿಮಿತ್ತ ನಾನು ದೆಹಲಿಗೆ ಹೋಗುತ್ತಿರುವ ಕಾರಣ ಪ್ರತಿಭಟನೆಯಲ್ಲಿ ಭಾಗಿಯಾಗುವುದಿಲ್ಲ. ಹೀಗಾಗಿ ಪಕ್ಷದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net