ಕೇಂದ್ರದಿ0ದ ಕಾರ್ಮಿಕ ವಿರೋಧಿ ನೀತಿ

bkt-20-1
ಗಲಕೋಟೆ ಜಿಲ್ಲಾಡಳಿತ ಭವನ ಎದುರು ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು.
Published on

ಬಾಗಲಕೋಟೆ: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಆಶಾ ಕಾರ್ಯಾಕರ್ತೆಯರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು, ಅಸಂಘಟಿತ ವಲಯದ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಸ್ಕೀಮ್ ಕಾರ್ಮಿಕರು ಸೇರಿದಂತೆ ಎಲ್ಲ ರಾಷ್ಟಿçÃಯ ಕನಿಷ್ಠ ವೇತನ ೨೬೦೦೦ ರೂ. ವರೆಗೆ ಪ್ರತಿ ತಿಂಗಳು ನೀಡಬೇಕು, ವಿವಿಧ ಯೋಜನೆಗಳ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಕ್ಯಾಶುವಲ್ ಮಾಡಬಾರದು. ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಸಂಘಟಿತ ಕಾರ್ಮಿಕರು, ಕೃಷಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಕಾರ್ಮಿಕರಿಗೆ ಕನಿಷ್ಠ ೯ ಸಾವಿರ ರೂ. ಪಿಂಚಣಿ, ಸಾಮಾಜಿಕ ಭದ್ರತೆ ಒದಗಿಸಬೇಕು, ಮನೆ ಆಧಾರಿತ ಕಾರ್ಮಿಕರು, ವ್ಯಾಪರಿಗಳು, ಚಿಂದಿ ಆಯುವವರು, ಗೃಹ ಕಾರ್ಮಿಕರು, ವಲಸೆ ಕಾರ್ಮಿಕರು, ವ್ಯಾಪಾರಿಗಳು ಸೇರಿದಂತೆ ಎಲ್ಲ ಕಾರ್ಮಿಕರನ್ನು ಒಂದೇ ಸೂರಿನಡಿ ಪೋರ್ಟಬಿಲಿಟಿ ಮಾಡಬೇಕು. ಹಳೇ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಿ ಎನ್‌ಪಿಎಸ್, ಯುಪಿಎಸ್ ರದ್ದುಗೊಳಿಸಿ ಬೋನಸ್, ಭವಿಷ್ಯ ನಿಽ ಪಾವತಿ ಮತ್ತು ಅರ್ಹತೆಯ ಮೇಲಿನ ಎಲ್ಲ ಮೀತಿಗಳನ್ನು ತೆಗೆದು ಹಾಕಬೇಕು, ಗ್ಯಾಚ್ಯೂಟಿ ಪ್ರಮಾಣ ಪತ್ರ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ತಿದ್ದುಪಡಿ ಮಸೂದೆ ೨೦೨೨ ಹಿಂದೆ ತೆಗೆದುಕೊಳ್ಳಬೇಕು, ಖಾಸಗೀಕರಣ ನಿಲ್ಲಿಸಿ ಪ್ರಿಪೇಡ್ ಸ್ಮಾರ್ಟ್ ಮೀಟರ್ ಅಳವಡಿಸಿ ನಿಲ್ಲಿಸಬೇಕು, ಕೆಲಸ ಹಕ್ಕನ್ನು ಮೂಲ ಸೌಲಭ್ಯ ಒದಗಿಸಬೇಕು, ಮಂಜೂರಾದ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು, ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸಬೇಕು, ಎಲ್ಲರಿಗೂ ಉಚಿತ ಶಿಕ್ಷಣ, ಆರೋಗ್ಯದ ಹಕ್ಕು, ನೀರು, ನೈರ್ಮಲ್ಯ ಹಕ್ಕು ಖಾತರಿ ಪಡಿಸಬೇಕು, ಹೊಸ ಶಿಕ್ಷಣ ನೀತಿ ರದ್ದುಗೊಳಿಸಬೇಕು ಎಂದು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆ ಮುಖಂಡರಾದ ರಮೇಶ ಗೌಡರ, ಕಮಲಾ ತೇಲಿ, ಶೋಭಾ ಪಾಟೀಲ, ಅಂಜನಾ ಕುಂಬಾರ, ಶೀಲಾ ಮೆಳ್ಳಿಗೇರಿ, ಮಂಜುಳಾ ಬಕ್ರಿ, ಮಹಾದೇವಿ ಸಾಲಿಮಠ, ನಂದಾ ಕಾಂಬಳೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net