ಕೇಂದ್ರದಿಂದ ಗ್ರಾಮೀಣಾಭಿವೃದ್ಧಿ ನಿರ್ಲಕ್ಷೃ : ಟಿ.ಯಶವಂತ ಆರೋಪ

0808-Kpl-Ravi-1
Published on

ಕೊಪ್ಪಳ: ಕೇಂದ್ರ ಸರ್ಕಾರ ಆರೋಗ್ಯ, ಶಿಕ್ಷಣ, ಉದ್ಯೋಗ ಖಾತಿ, ಆಹಾರ ಭದ್ರತೆ ಮತ್ತು ಗ್ರಾಮೀಣ ಭಾಗ ಅಭಿವೃದ್ಧಿಗೆ ನಿರಂತರ ಅನುದಾಣ ಕಡಿತ ಮಾಡುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳುವ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಲಾಭದಾಯ ಬೆಲೆ ನೀಡುತ್ತಿಲ್ಲ. ರೈತರ ಆತ್ಮಹತ್ಯೆ, ಸಾಲ ಡಬಲ್ ಆಗಿದೆ. ಕೃಷಿ ರಂಗ ವಿರೋಧಿ ಕಾನೂನು ಜಾರಿಗೆ ತರುವ ಮೂಲಕ ರೈತ ವಿರೋಧಿ ಆಡಳಿತ ನಡೆಸುತ್ತಿದೆ. ಅಂಥ ಸರ್ಕಾರವನ್ನು ಜನರು ತಿರಸ್ಕರಿಸಬೇಕು. ಬರ ಪಡೀತ ಪ್ರದೇಶವಾದ ಕೊಪ್ಪಳ ಜಿಲ್ಲೆ ಯನ್ನು ನೀರಾವರಿಗೆ ಒಳಪಡಿಸಲು ಬಚಾವತ್‌ತೀರ್ಪಿನ ಪ್ರಕಾರ ಸಿಕ್ಕಿರುವ ಕೃಷ್ಣ ನದಿ ನೀರನ್ನು ಬಳಸಲು ಯೋಜನೆ ರೂಪಿಸಿಲ್ಲ. ಈ ಭಾಗದ ಶಾಸಕರು, ಸಚಿವರು, ಸಂಸತ್ ಸದಸ್ಯರು ಕಾಲಹರಣ ಮಾಡುತ್ತಿದ್ದಾರೆ. ಬಲವಾದ ಹೋರಾಟದ ಮೂಲಕ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡ ಎಚ್.ಆರ್.ನವೀನ್ ಕುಮಾರ್ ಸ್ವಾತಂತ್ರೃ ಲಭಿಸಿ 76 ವರ್ಷಗಳಾದರೂ ರೈತರಿಗೆ ತಮ್ಮ ಉತ್ಪನ್ನಕ್ಕೆ ಬೆಲೆ ನಿಗದಿ ಮಾಡುವ ಸ್ವಾತಂತ್ರೃ ಸಿಕ್ಕಿಲ್ಲ. ನಿರುದ್ಯೋಗ, ಬಡತನ ಹೆಚ್ಚುತ್ತಿದೆ. ಕೃಷಿ ಭೂಮಿ ಉದ್ಯಮಿಗಳ ಪಾಲಾಗುತ್ತಿದೆ. ಆಡಳಿತ ಹೀಗೆ ಮುಂದುವರಿದರೆ, ದೇಶದಲ್ಲಿ ಅನ್ನಕ್ಕಾಗಿ ಹಾಹಾಕಾರ ಸೃಷ್ಟಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.


ಸಂಘದ ಪದಾಧಿಕಾರಿಗಳಾದ ದೊಡ್ಡನಗೌಡ ಪಾಟೀಲ್, ಜಿ.ನಾಗರಾಜ, ಖಾಸಿಂ ಸರ್ದಾರ, ಸಂಗಮ್ಮ, ಆರ್.ಕೆ.ದೇಸಾಯಿ, ಎಂ.ಸಿದ್ದಪ್ಪ, ಶಿವಕುಮಾರ ಗಂಗಾವತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net