

ಸಿಂಧನೂರು: ಉದ್ಯಮಿ ಗೌತಮ್ ಅದಾನಿ ವಿರುದ್ಧದ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ ತಾಲೂಕು ಘಟಕದಿಂದ ಮಿನಿವಿಧಾನಸೌಧ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕೋಮುಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದನ್ನು ತಡೆಗಟ್ಟಬೇಕು. ಮಣಿಪುರದಲ್ಲಿ ಶಾಂತಿ ಸ್ಥಾಪಿಸಬೇಕು. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರ ಪ್ರಜಾತಂತ್ರ ವಿರೋಧಿ ಆಡಳಿತ ನಡೆಸುತ್ತಿದೆ. ದೇಶದಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮುಖ್ಯತೆ ನೀಡದೆ, ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಏಜೆಂಟರಂತೆ ಆಡಳಿತ ನಡೆಸುತ್ತಿದೆ ಎಂದು ದೂರಲಾಯಿತು.