ಕೇಂದ್ರೀಯ ವಿವಿಯಲ್ಲಿ ಕನ್ನಡ ನಿರ್ಲಕ್ಷ

Kannada Flag
Published on

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ರಾಜ್ಯದ ಆಡಳಿತ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ ಅವರು ವಿವಿ ಕುಲಸಚಿವರಿಗೆ ಪತ್ರ ಬರೆದಿದ್ದಾರೆ. ಕೇಂದ್ರೀಯ ವಿವಿಯಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಿಲ್ಲ ಎಂಬ ಆನಂದ ಸಿದ್ದಮಣಿ ಅವರ ದೂರು ಉಲ್ಲೇಖಿಸಿ, ಪತ್ರ ಬರೆದಿದ್ದು, ಕರ್ನಾಟಕದಲ್ಲಿ ಕನ್ನಡವೇ ಸೌರ್ವಭೌಮ ಭಾಷೆಯಾಗಿದ್ದು, ಆಡಳಿತದ ಎಲ್ಲ ಹಂತದಲ್ಲೂ ಕನ್ನಡ ಅನುಷ್ಠಾನಗೊಳಿಸಬೇಕು. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರದ ಇಲಾಖೆಗಳು, ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ಯಮ, ಸಂಸ್ಥೆಗಳು ಆಯಾ ರಾಜ್ಯ ಭಾಷೆಯಲ್ಲಿ ವ್ಯವಹರಿಸಬೇಕು ಹಾಗೂ ತ್ರಿಭಾಷಾ ಸೂತ್ರವನ್ನು ಪಾಲಿಸಬೇಕು. ಅದನ್ನು ಪಾಲಿಸದಿರುವುದು ವಿಷಾದನೀಯ. ಕೂಡಲೇ ಈ ಕುರಿತು ಪರಿಶೀಲಿಸಿ, ಕನ್ನಡ ಅನುಷ್ಠಾನಕ್ಕೆ ಕ್ರಮ ವಹಿಸಲು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net