

ಬಾಗಲಕೋಟೆ: ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಪಿಜಿ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿವಿಯ ಕಾನೂನು ವಿಭಾಗದ ಡೀನ್ ಬಸವರಾಜ ಕುಬಕಡ್ಡಿ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎ, ಎಂಕಾA, ಎಂಬಿಎ, ಎಂಎಸ್‌ಸಿ, ಎಂಸಿಎ, ಎಲ್‌ಎಲ್‌ಎಂ, ಬಿಈಡಿ, ಎಂಈಡಿ ಸೇರಿದಂತೆ ವಿವಿಧ ವಿಭಾಗಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಸಿಯುಇಟಿ ಪರೀಕ್ಷೆ ಮೂಲಕ ಪ್ರವೇಶ ನೀಡಲಾಗುತ್ತದೆ. ಪದವಿ ಅಂತಿಮ ಸೆಮಿಸ್ಟರ್, ಈಗಾಗಲೇ ಪದವಿ ಪಡೆದ ವಿದ್ಯಾರ್ಥಿಗಳು ಅರ್ಜಿ ಹಾಕಲಾಗಿದೆ. -ೆ.೧ ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾ.೧೩ ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದರು.
ಕೇ0ದ್ರೀಯ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ನುರಿತ ಸಿಬ್ಬಂದಿ ಹೊಂದಿದ್ದು, ವಸತಿ ವ್ಯವಸ್ಥೆ, ಗ್ರಂಥಾಲಯ ಸೇರಿದಂತೆ ಎಲ್ಲ ಸೌಲಭ್ಯಗಳೂ ಇವೆ. ೫೦೦ ಕ್ಕೂ ಹೆಚ್ಚು ಪ್ರದೇಶದಲ್ಲಿ ವಿಶ್ವ ವಿದ್ಯಾಲಯವಿದ್ದು, ಅಧ್ಯಯನಕ್ಕೆ ಪೂರಕವಾದ ವಾತಾವರಣ ಕಲ್ಪಿಸಲಾಗಿದೆ. ಉತ್ತರ ಭಾರತದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ನಮ್ಮ ಭಾಗದವರು ಇದರ ಉಪಯೋಗ ಪಡೆದುಕೊಳ್ಳಬೇಕು. ವಸತಿ, ಊಟ ವ್ಯವಸ್ಥೆ, ವೈ-ff ಸೌಲಭ್ಯ ಇದೆ. ಅತ್ಯಂತ ಕಡಿಮೆವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಲು ಅವಕಾಶವಿದೆ ಎಂದು ಮನವಿ ಮಾಡಿದರು.