ಕೇಕ್ ಕತ್ತರಿಸಿ ಜಯಂತಿ ಆಚರಣೆ

ಕೇಕ್ ಕತ್ತರಿಸಿ ಜಯಂತಿ ಆಚರಣೆ
Published on

ಬೈಲುಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನೂರು ಗ್ರಾಮದಲ್ಲಿ ಜೈ ಭೀಮ್ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕೇಕ್ ಕತ್ತರಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಪಿರಿಯಾಪಟ್ಟಣ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಜನರು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುನ್ನೆಲೆಗೆ ಬರಬೇಕು ಎಂದು ಹೇಳಿದರು.

ಮಕ್ಕಳು ಓದಿನ ಕಡೆ ಗಮನಹರಿಸಿ ಸಾಧನೆಯ ಹಾದಿಯಲ್ಲಿ ಸಾಗಬೇಕು. ಪಾಲಕರು ಪ್ರೋತ್ಸಾಹ ನೀಡಬೇಕು ಎಂದರು.

ಸಂಘದ ವತಿಯಿಂದ ಮಹಿಳೆಯರಿಗೆ ರಂಗೋಲೆ ಸ್ಪರ್ಧೆ, ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

ಜೈ ಭೀಮ್ ಯುವಕ ಸಂಘದ ಅಧ್ಯಕ್ಷ ಶಶಿಕುಮಾರ್, ಕಾರ್ಯದರ್ಶಿ ಶಿವರಾಜ್, ಪದಾಧಿಕಾರಿಗಳಾದ ಚೇತನ್, ಕಿರಣ್, ಸುದೀಪ್, ಪ್ರಮುಖರಾದ ಕುಮಾರ್, ರವಿ, ಕಾಂತರಾಜ್, ಮಂಜು, ರಂಗನಾಥ್, ಸಂತೋಷ್, ಕೃಷ್ಣೆಗೌಡ, ಮಹೇಶ್ ಕುಮಾರ್, ಹರೀಶ್, ಅಣ್ಣಪ್ಪ, ಚಂದ್ರೇಶ್, ಲೋಕೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net