

ಬೀದರ್: ತಾಲ್ಲೂಕಿನ ನಾಗೋರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘೋಡಂಪಳ್ಳಿ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳದಲ್ಲಿ ಭಾನುವಾರ ಕೇಕ್ ಕತ್ತರಿಸಿ ನರೇಗಾ ಜಾರಿಗೆ ಬಂದ ದಿನ ಆಚರಿಸಲಾಯಿತು.
ಕೇಕ್ ಕತ್ತರಿಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಯಾಕತಪುರ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರಿಗೆ ವರದಾನವಾಗಿದೆ. ಕಾರ್ಮಿಕರ ಗುಳೆ ತಪ್ಪಿಸಲು ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಮಿಕರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರಾದ ಆದಿತ್ಯ ರೆಡ್ಡಿ, ವಿಜಯಕುಮಾರ, ತುಕಾರಾಮ, ಪ್ರಮುಖರಾದ ಹರಿಓಂ ಮತ್ತಿತರರು ಇದ್ದರು.