ಕೇಜ್ರಿವಾಲ್ ವರ್ಚಸ್ಸು ಕುಗ್ಗಿಸುವ ಉದ್ದೇಶ

28LNG03
Published on

ಲಿಂಗಸುಗೂರು: ದೆಹಲಿ ಸರ್ಕಾರದ ಡಿಸಿಎಂ, ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಎಸಿ ಅವಿನಾಶ ಶಿಂಧೆಗೆ ಆಮ್ ಆದ್ಮಿ ಪಕ್ಷದಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಿಸೋಡಿಯಾ ಬಂಧನದ ಹಿಂದೆ ಬಿಜೆಪಿ ಕೇಂದ್ರ ನಾಯಕರ ಕೈವಾಡವಿದೆ. ಆಮ್ ಆದ್ಮಿ ಪಕ್ಷದ ಕಾರ್ಯವೈಖರಿ ಸಹಿಸದ ಕೇಂದ್ರ ಸರ್ಕಾರ ಇಲ್ಲಸಲ್ಲದ ಆರೋಪದಡಿ ಸಿಬಿಐ ಮೂಲಕ ಬಂಧಿಸಿರುವುದು ಖಂಡನೀಯ. ಅಭಿವೃದ್ಧಿ ಕಾರ್ಯದಲ್ಲಿ ಹೆಸರಾದ ಸಿಎಂ ಅರವಿಂದ್ ಕೇಜ್ರಿವಾಲರ ವರ್ಚಸ್ಸು ಕುಗ್ಗಿಸುವ ಉದ್ದೇಶದಿಂದ ಸುಳ್ಳು ಆರೋಪಗಳಡಿ ಸಿಸೋಡಿಯಾರನ್ನು ಬಂಧಿಸಲಾಗಿದೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net